ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜುಲೈ 23, 2026: ಬುಧನ ಸಂಚಾರ! ಈ ರಾಶಿಗೆ ಕೈ ಹಾಕಿದ ಕೆಲಸದಲ್ಲಿ ಭರ್ಜರಿ ಸಕ್ಸಸ್!

Horoscope Today July 23rd: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ವಿಶಾಖ ನಕ್ಷತ್ರದ, ಜುಲೈ 23ನೇ ತಾರೀಖಿನ ಗುರುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ವಿಶಾಖ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಇಂದು ಬುಧ ವಕ್ರ ತ್ಯಾಗ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನ ರಾಶಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಗೆ ಇಂದು ಮನಸ್ಸಿಗೆ ಕ್ಷೇಶ ಹಾಗೂ ಬಂಧು ಮಿತ್ರರಿಂದ ತೊಂದರೆ ಎದುರಾಗುತ್ತದೆ. ಸ್ನೇಹ- ಸಂಬಂಧದಲ್ಲಿ ಒಡಕು ಕಾಣಬಹುದು.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತನವಾದ ದಿನವಾಗಿದ್ದು ಆತ್ಮವಿಶ್ವಾಸ ತುಂಬಾನೇ ಚೆನ್ನಾಗಿ ಇರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯಲಿವೆ. ಹಾಗೂ ನೆಮ್ಮದಿಯಿಂದ ಸಮಯ ಕಳೆಯಬಹುದು‌

ಮಿಥುನ ರಾಶಿ: ಇಂದು ಈ ರಾಶಿಗೆ ಇಂದು ಉತ್ತಮವಾದ ಗೋಚರವಿರುತ್ತದೆ. ವೈಯಕ್ತಿಕ ಬದಲಾವಣೆಗಳು ಆಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಾತಿನಿಂದ ತೊಂದರೆ ಎದುರಾಗಲಿದ್ದು ಕೆಲವರ ಸ್ನೇಹವನ್ನು ಕಳೆದುಕೊಳ್ಳಬಹುದು‌.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ನಿಮ್ಮ ಮಾತಿನ ಮೂಲಕ ಇಂದು ಯಶಸ್ಸುಗಳಿಸುತ್ತೀರಿ.

ಕನ್ಯಾ ರಾಶಿ: ಕನ್ಯಾ ರಾಶಿಯವರು ಇಂದು ಎಲ್ಲ ಕೆಲಸದಲ್ಲಿ ಜಯಗಳಿಸುತ್ತೀರಿ. ನಿಮ್ಮ ಮಾತಿನ ಮೂಲಕವೇ ಎಲ್ಲವನ್ನು ಇಂದು ಗೆಲ್ಲುತ್ತೀರಿ.

Vastu Tips: Vastu Tips: ಈ ವಾಸ್ತು ನಿಯಮಗಳನ್ನು ಪಾಲಿಸಿದ್ರೆ ಮನೆಯಲ್ಲಿ ಅತ್ತೆ-ಸೊಸೆ ಜಗಳವೇ ಇರೊಲ್ಲ!

ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಒಡಕು ಕಾಣಬಹುದು. ನಿಮ್ಮ ವೈಯಕ್ತಿಕ ನಿರ್ಧಾರದಿಂದಲೇ ಅಪಾಯ ಸಂಭವಿಸಬಹುದು‌

ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಪ್ರೀತಿ ಪಾತ್ರರಿಂದ ಜಯ ಸಿಗುತ್ತದೆ. ಕೆಲಸಕಾರ್ಯದಲ್ಲೂ ಯಶಸ್ಸು.

ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ಬದಲಾವಣೆ ಕಾರ್ಯಕ್ಷೇತ್ರದದಲ್ಲಿ ದೊಡ್ಡದಾದ ಯಶಸ್ಸು ಕಾಣುತ್ತೀರಿ. ಶತ್ರು ನಾಶವಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕೆಲಸ ಕಾರ್ಯದಲ್ಲಿ ಅಡಚಣೆ ಉಂಟಾಗುತ್ತದೆ. ಹಾಗಾಗಿ ಕೆಲಸ ಕಾರ್ಯದಲ್ಲಿ ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಿ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನೆಯಲ್ಲಿ ಹಾಗೂ ವೈಯಕ್ತಿಕವಾಗಿ ನೆಮ್ಮದಿ ಇರುತ್ತದೆ.