ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಮಾರ್ಚ್ 7, 2026: ಇಂದು ವ್ಯವಹಾರದಲ್ಲಿ ನಷ್ಟ ಸಾಧ್ಯತೆ

Horoscope Today March 7: ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಶರದೃತು, ಫಾಲ್ಗುಣ ಮಾಸೆ, ಕೃಷ್ಣೆ ಪಕ್ಷ, ಚತುರ್ಥಿ ತಿಥಿ, ಚಿತ್ತ ನಕ್ಷತ್ರದ ಮಾರ್ಚ್ 7ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು, ಮಾ. 7: ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಚಿತ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಮೇಷ ರಾಶಿ: ಇಂದು ಚಿತ್ತ ನಕ್ಷತ್ರ ಇದ್ದು ಇದರ ಅಧಿಪತಿ ಕುಜ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಅತೀ ಉತ್ತಮ ದಿನವಾಗಲಿದೆ.‌ ಮನಸ್ಸಿಗೆ ನೆಮ್ಮದಿ ಇದ್ದು ಎಲ್ಲ ಕಡೆಯಿಂದಲೂ ನಿಮಗೆ ಸಹಕಾರ ಪ್ರಾಪ್ತಿಯಾಗುತ್ತದೆ. ಆದ್ದರಿಂದ ಎಲ್ಲ ಕಾರ್ಯದಲ್ಲೂ ನೀವು‌ ಜಯವನ್ನು ಕಾಣುತ್ತೀರಿ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದರೂ ಹಣಕಾಸಿನ ವಿಚಾರದಲ್ಲಿ ತೊಂದರೆ ಕಂಡು ಬರಬಹುದು.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಕಷ್ಟ ಗೋಚರವಾಗಲಿದೆ. ತಾಯಿಯ ಜತೆಗೆ ಮನಸ್ತಾಪ ಬರಬಹುದು. ಕೋರ್ಟ್, ವ್ಯವಹಾರದಲ್ಲೂ ಮನಸ್ಸಿಗೆ ಬೇಸರ ಆಗಬಹುದು.

ಕಟಕ ರಾಶಿ: ಕಟಕ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಲಿದೆ. ಎಲ್ಲ ಕೆಲಸ ಕಾರ್ಯದಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಮಾತಿನ ಮೂಲಕ ಇಂದು ಎಲ್ಲರನ್ನು ನೀವು ಗೆಲ್ಲಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರಿಗೆ ಉತ್ತಮ ದಿನವಾಗಲಿದೆ.

ನಿದ್ರಾಹೀನತೆ ಹೆಚ್ಚಳಕ್ಕೆ ಮಲಗುವ ಕೋಣೆಯೇ ಕಾರಣವೇ?

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮನೆಯಲ್ಲಿ ಸ್ವಲ್ಪ ಮಾತಿನ ಚಕಮಕಿ ನಡೆಯಬಹುದು. ಆದ್ದರಿಂದ ಬೇರೆಯವರ ಜತೆ ವಿನಮ್ರತೆಯಿಂದ ನಡೆದುಕೊಳ್ಳಬೇಕು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ನೋವೆಲ್ಲ ಮಾಯವಾಗಲಿದೆ. ಮನಸ್ಸಿಗೆ ಅತೀ ಹೆಚ್ಚಿನ ಖುಷಿ ಕಾಣುತ್ತೀರಿ.

ತುಲಾ ರಾಶಿ: ತುಲಾ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಇಂದು ಬೇಡ. ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ನಿಮಗೆ ಸಿಗುವುದಿಲ್ಲ. ಧನ ವ್ಯಯವಾಗುವ ಸಾಧ್ಯತೆ ಇರುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಧನಾಗಮನದ ಸೂಚನೆ ಕೂಡ ಇರಲಿದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದ್ದು ಎಲ್ಲ ಕೆಲಸದಲ್ಲಿ ಜಯ ಸಿಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ ಇದ್ದು ಅದೃಷ್ಟದ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಲಲ್ಲಿದ್ದ ತೊಂದರೆ ಬಗೆಹರಿದು ಮಾರ್ಗದರ್ಶನ ಪ್ರಾಪ್ತಿಯಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಲಿದೆ. ಮನಸ್ಸಿಗೆ ನಾನಾ ರೀತಿಯ ಕ್ಷೇಷ ಕಂಡು ಬರುವ ಸಾಧ್ಯತೆ ಇದೆ. ಧ್ಯಾನಾದಿಗಳನ್ನು ಮಾಡಿ ನೀವು ಸಮಯ ಕಳೆಯಬೇಕಾಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆದೆ. ಮನಸ್ಸಿಗೆ ನೆಮ್ಮದಿ ಇರಲಿದ್ದು ದಾಂಪತ್ಯದಲ್ಲಿ ಸುಖ ಸಿಗಲಿದೆ.