ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು, ವೈಶಾಖ ಮಾಸೆ, ಮಘಾನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಮಘಾ ನಕ್ಷತ್ರದ ಅಧಿಪತಿ ಕೇತು ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಗೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಕ್ಕರೂ ಬೇರೆಯವರ ಸಹಾಯವನ್ನು ಕಳೆದು ಕೊಳ್ಳುವ ಸಾಧ್ಯತೆ ಇರುತ್ತದೆ. ಆದರೆ ಇತರರ ಜೊತೆ ವಿನಮ್ರತೆಯಿಂದ ಮಾತ ನಾಡಿಸಬೇಕಾಗುತ್ತದೆ.
ವೃಷಭ ರಾಶಿ: ವೃಷಭ ರಾಶಿ ಅವರಿಗೆ ಮನೆಯಲ್ಲಿ ಮಾತಿನ ಚಕಮಕಿ ಮತ್ತು ಜಗಳ ಉಂಟಾಗುವ ಸಾಧ್ಯತೆ ಹೆಚ್ಚಾಗಿ ಇರುತ್ತದೆ. ತಾಯಿಗೆ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಬೇಕು.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಅತೀ ಉತ್ತಮವಾದ ದಿನವಾಗಿದೆ. ಎಲ್ಲ ಕೆಲಸ ಕಾರ್ಯದಲ್ಲಿ ಗೆಲುವು ನಿಮ್ಮದಾಗುತ್ತದೆ. ಹೆಚ್ಚಿನ ಆತ್ಮವಿಶ್ವಾಸ ನಿಮಗೆ ಇರುತ್ತದೆ. ಯಾವುದೇ ರೀತಿಯ ತೊಂದರೆ ಇಂದು ಇರುವುದಿಲ್ಲ.
ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ ದಿನ ಭವಿಷ್ಯ:
ಕಟಕ ರಾಶಿ: ಕಟಕ ರಾಶಿ ಅವರು ಮನೆಯವರ ಬಗ್ಗೆ ಹೆಚ್ಚಾಗಿ ಯೋಚಿಸಬೇಕಾಗುತ್ತದೆ. ಬೇರೆಯವರಿಗೆ ನಿಮ್ಮ ಮಾತಿನಿಂದ ಇಂದು ಹಿಂಸೆ ಉಂಟಾಗಬಹುದು. ಹಾಗಾಗಿ ಮಾತಿನಲ್ಲಿ ನಿಗಾ ಇರಿಸಿ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಹಿಂದಿನ ದಿನದಲ್ಲಿ ಇದ್ದ ನೋವೆಲ್ಲ ಇಂದು ಮಾಯವಾಗಿದೆ. ಕೆಲಸ ಕಾರ್ಯದಲ್ಲಿ ಹೆಚ್ಚಿನ ಆತ್ಮವಿಶ್ವಾಸ ನಿಮಗೆ ಒದಗಿಬರಬಹುದು.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರ ಮಾಡಲು ಹೋಗಬೇಡಿ. ಅದೇ ರೀತಿ ಪ್ರೀತಿ ಪಾತ್ರರಿಂದಲೂ ಯಾವುದೇ ನೆಮ್ಮದಿ ನಿಮಗೆ ಸಿಗುವುದಿಲ್ಲ.
Vastu Tips: ಅಡುಗೆ ಮನೆಯಲ್ಲಿ ಈ ಪದಾರ್ಥಗಳನ್ನು ಇಟ್ಟರೆ ದಾರಿದ್ರ್ಯ ಹೆಚ್ಚಾಗುತ್ತದೆ!
ತುಲಾ ರಾಶಿ: ತುಲಾ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಜಯ ಪ್ರಾಪ್ತಿಯಾಗಲಿದ್ದು ಇಷ್ಟಾರ್ಥ ಸಿದ್ದಿ ಯಾಗುತ್ತದೆ. ಮನಸ್ಸಿಗೆ ನೆಮ್ಮದಿ ಇದ್ದು ಮಿತ್ರರಿಂದ ಧನ ಆಗಮನವಾಗುತ್ತದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಭಾಗ್ಯೋದಯವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ. ಎಲ್ಲ ತೊಂದರೆ ಬಗೆಹರಿದು ನೆಮ್ಮದಿ ಸಿಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಉತ್ತಮವಾದ ದಿನವಾಗಿದ್ದು ಭಾಗ್ಯೋದಯವಾಗಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಎಲ್ಲವೂ ಇಂದು ಮಾಯವಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ಯಾವುದೇ ನಿರ್ಧಾರ ಮಾಡಲು ಹೋಗಬೇಡಿ
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನ ವಾಗಿದೆ. ಪ್ರೀತಿ ಪಾತ್ರರಿಂದ ಮನಸ್ಸಿಗೆ ನೆಮ್ಮದಿ ಸಹಕಾರ ಪ್ರಾಪ್ತಿಯಾಗುತ್ತದೆ. ಎಲ್ಲದರಲ್ಲೂ ಇಂದು ಜಯ ಪ್ರಾಪ್ತಿಯಾಗುತ್ತದೆ.
ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಹಿಂದಿನ ತೊಂದರೆ ಮಾಯವಾಗುತ್ತದೆ.