ದಿನ ಭವಿಷ್ಯ, ಜೂನ್ 11, 2026: ಹಿಂದೆ ಇದ್ದ ಅಡೆ-ತಡೆಗಳು ದೂರವಾಗುವ ದಿನ
Horoscope Today June 11th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಅಶ್ವಿನಿ ನಕ್ಷತ್ರದ ಜೂನ್ 11ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು, ಜೂ. 11: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಏಕಾದಶಿ ತಿಥಿ, ಅಶ್ವಿನಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಅಶ್ವಿನಿ ನಕ್ಷತ್ರದ ಅಧಿಪತಿ ಕೇತು. ಹಾಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಎಲ್ಲವೂ ಬಗೆಹರಿದು ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಷಭ ರಾಶಿ: ಈ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ಕೈಗೊಳ್ಳಬೇಡಿ. ಕೋರ್ಟ್, ಕಚೇರಿ ವ್ಯವಹಾರದಲ್ಲಿ ಯಾವುದೇ ಕೆಲಸ ನಿಮ್ಮ ಪರವಾಗಿ ನಡೆಯುವುದಿಲ್ಲ.
ಮಿಥುನ ರಾಶಿ: ಈ ರಾಶಿಯವರಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ. ಮಿತ್ರರಿಂದ ಧನಾಗಮನದ ಸೂಚನೆ ಕೂಡ ಇದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಮುಖ್ಯ ಬದಲಾವಣೆ ಕಂಡು ಬರಲಿದೆ. ನೀವು ಅಂದುಕೊಳ್ಳದಷ್ಟು ಯಶಸ್ಸು ಪ್ರಾಪ್ತಿಯಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ಮನಸ್ಸಿನ ನೋವೆಲ್ಲ ಇಂದು ಮಾಯವಾಗುತ್ತದೆ. ಅದೇ ರೀತಿ ಅದೃಷ್ಟದ ದಿನ ನಿಮ್ಮದಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ಬೇಡ. ಯಾವುದೇ ರೀತಿಯಲ್ಲಿ ಮನಸ್ಸಿಗೆ ನೆಮ್ಮದಿ ಸಿಗುವುದಿಲ್ಲ.
ಈ ದಿಕ್ಕಿನಲ್ಲಿ ಮಲಗಿದ್ರೆ ಜೀವಕ್ಕೆ ಆಪತ್ತು ಕಟ್ಟಿಟ್ಟ ಬುತ್ತಿ ಎನ್ನುತ್ತದೆ ವಾಸ್ತು ಶಾಸ್ತ್ರ
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು, ಪಾರ್ಟನರ್‌ಶಿಪ್ ವ್ಯವಹಾರದಲ್ಲಿ ಜಯ ಗಳಿಸುತ್ತಿರಿ. ದಾಂಪತ್ಯದಲ್ಲಿ ನೆಮ್ಮದಿ ಕಂಡು ಬರಲಿದೆ.
ವೃಶ್ಚಿಕ ರಾಶಿ: ಈ ರಾಶಿಯವರ ಆರೋಗ್ಯ ಸುಧಾರಿಸಲಿದೆ. ಕ್ರೀಡೆ, ವರ್ಕೌಟ್‌ನಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕಾಭಿವೃದ್ಧಿ ಕಂಡು ಬರಲಿದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಬುದ್ದಿವಂತಿಕೆ ಉಪಯೋಗಿಸುವ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ದಾಂಪತ್ಯದಲ್ಲಿ ನೋವು ಉಂಟಾಗುವ ಸಾಧ್ಯತೆ ಇದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಕೆಲಸ, ಹಾಗೂ ಹೆಚ್ಚು ತಲೆಕೆಡಿಸಿಕೊಳ್ಳಬೇಕಾಗಬಹುದು. ಕೋರ್ಟ್, ಕಚೇರಿ ವ್ಯವಹಾರದಲ್ಲೂ ತೊಂದರೆ ಎದುರಾಗಲಿದೆ.
ಕುಂಭ ರಾಶಿ: ಈ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಆದರೂ ಆತ್ಮವಿಶ್ವಾಸದಿಂದ ಗೆಲುವು ಸಾಧಿಸಬಹುದು.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಂಸಾರದಲ್ಲಿ ನಿಮಗೆ ನೆಮ್ಮದಿ ಇರುತ್ತದೆ. ಮನೆಯವರ ಜತೆ ಉತ್ತಮ ಸಮಯ ಕಳೆಯಲಿದ್ದೀರಿ.