ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಚಿತ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಸಪ್ತಮದಲ್ಲಿ ಗಜಕೇಸರಿ ಯೋಗ ಪ್ರಾಪ್ತಿಯಾಗುತ್ತದೆ. ಹೀಗಾಗಿ ಪಾರ್ಟನರ್‌ಶಿಪ್ ವ್ಯವಹಾರದಲ್ಲಿ ನೆಮ್ಮದಿಯ ಜತೆಗೆ ಯಶಸ್ಸು ಸಿಗಲಿದೆ. ಪ್ರೀತಿ ಪಾತ್ರರ ಜೊತೆಗೂ ಖುಷಿಯಿಂದ ಸಮಯ ಕಳೆಯುತ್ತೀರಿ.
ವೃಷಭ ರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೆ ನಾನಾ ರೀತಿಯ ಯೋಚನೆಗಳು ಕಾಡಬಹುದು. ಮಧ್ಯಾಹ್ನ ಬಳಿಕ ಎಲ್ಲ ತೊಂದರೆಗಳು ಬಗೆಹರಿದು ಆತ್ಮವಿಶ್ವಾಸ ಮೂಡಲಿದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಮಧ್ಯಾಹ್ನವರೆಗೂ ಮನೆಯ ತಾಪತ್ರಯ ಹೆಚ್ಚಾಗಿರುತ್ತವೆ. ಮಧ್ಯಾಹ್ನ ಬಳಿಕ ಹಣಕಾಸಿನ ಬಗ್ಗೆ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಕಲಾವಿದರರಿಗೆ ಇಂದು ಲಾಭದಾಯಕ ದಿನವಾಗಲಿದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಮಧ್ಯಾಹ್ನವರೆಗೂ ಎಲ್ಲವೂ ಅವರ ಪರವಾಗಿ ಇರುತ್ತದೆ. ಮಧ್ಯಾಹ್ನ ಬಳಿಕ ಸ್ನೇಹ ಸಂಬಂಧದಲ್ಲಿ ಬೇಸರ ಮೂಡಬಹುದು ಅಥವಾ ಎಲ್ಲರೂ ದೂರವಾದರು ಎನ್ನುವ ಆತಂಕವೂ ಕಾಡಬಹುದು.
ವಿಡಿಯೋ ನೋಡಿ:
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮಧ್ಯಾಹ್ನವರೆಗೂ ಸಂಸಾರದಲ್ಲಿ ಅನೇಕ ರೀತಿಯ ತೊಂದರೆ ಕಾಡಬಹುದು. ಮಧ್ಯಾಹ್ನ ಬಳಿಕ ಬಂಧು ಭಾಂದವರ ಜತೆ ಖುಷಿಯಿಂದ ಸಮಯ ಕಳೆಯುತ್ತೀರಿ.
ಕನ್ಯಾ ರಾಶಿ: ಕನ್ಯಾ ರಾಶಿಯವರು ಮಧ್ಯಾಹ್ನವರೆಗೂ ವೈಯಕ್ತಿಕ ಬದಲಾವಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಮಧ್ಯಾಹ್ನ ಬಳಿಕ ಕುಟುಂಬದ ಬಗ್ಗೆ ಹೆಚ್ಚಿನ ಗಮನ ನೀಡಬೇಕು.
ತುಲಾ ರಾಶಿ: ತುಲಾ ರಾಶಿಯವರಿಗೆ ಮಧ್ಯಾಹ್ನವರೆಗೂ ಕಷ್ಟದ ದಿನವಾಗಲಿದೆ. ಮುಖ್ಯವಾದ ಸಂಬಂಧದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ.
ಸಾಕುಪ್ರಾಣಿಗಳಿಗೂ ವಾಸ್ತು ಇದೆ! ಯಾವ ಪ್ರಾಣಿಗೆ ಯಾವ ದಿಕ್ಕು ಶುಭ ಗೊತ್ತಾ?
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೂ ಎಲ್ಲವೂ ಅಂದುಕೊಂಡಂತೆ ನಡೆಯಲಿದೆ. ಇಷ್ಟಾರ್ಥ ಸಿದ್ದಿ ಹಾಗೂ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆದರೆ ಮಧ್ಯಾಹ್ನ ನಂತರ ಸ್ನೇಹ ಸಂಬಂಧದಲ್ಲಿ ಒಡಕು ಮೂದಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಮಧ್ಯಾಹ್ನವರೆಗೂ ಕಾರ್ಯ ಕ್ಷೇತ್ರದ ಜವಾಬ್ದಾರಿಗಳು ಹೆಚ್ಚಾಗಿರುತ್ತವೆ. ಮಧ್ಯಾಹ್ನ ಬಳಿಕ ಮಿತ್ರರ ಜತೆ ಮೋಜು, ಮಸ್ತಿ ಇತ್ಯಾದಿಯಲ್ಲಿ ಸಮಯ ಕಳೆಯುತ್ತೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಮಧ್ಯಾಹ್ನವರೆಗೂ ಅದೃಷ್ಟ ಪರೀಕ್ಷೆಗಳು ನಡೆಯುತ್ತಿರುತ್ತವೆ. ಮಧ್ಯಾಹ್ನ ಬಳಿಕ ಕಾರ್ಯ ಕ್ಷೇತ್ರದಲ್ಲಿ ಒಮ್ಮೆಲೇ ಯಶಸ್ಸು ಕಾಣುತ್ತೀರಿ.
ಕುಂಭ ರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೂ ತೊಂದರೆಗಳು ಎದುರಾಗಲಿದ್ದು ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮಧ್ಯಾಹ್ನ ಬಳಿಕ ನೆಮ್ಮದಿ ಹಾಗೂ ಹಿರಿಯರ ಆಶೀರ್ವಾದ ಪ್ರಾಪ್ತಿಯಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಮಧ್ಯಾಹ್ನವರೆಗೂ ನಾನಾ ರೀತಿಯ ಯೋಚನೆಗಳು ಕಾಡುತ್ತವೆ. ಮಧ್ಯಾಹ್ನ ಬಳಿಕ ಸಮಸ್ಯೆಗಳು ನಿವಾರಣೆಯಾಗಿ ನಿರಾಳತೆ ಸಿಗುತ್ತದೆ. ಆಧ್ಯಾತ್ಮಿಕವಾಗಿ ಹೆಚ್ಚಿನ ಸಮಯ ಇಂದು ಕಳೆಯುತ್ತೀರಿ.