ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಆಗಸ್ಟ್‌ 21, 2026: ಇಂದು ವರಮಹಾಲಕ್ಷ್ಮಿ ವ್ರತ; ಈ ರಾಶಿಗಿದೆ ಮಹಾಲಕ್ಷ್ಮಿಯ ಕೃಪೆ!

Horoscope Today August 21st: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಅನುರಾಧ ನಕ್ಷತ್ರದ,ಆಗಸ್ಟ್ 21ನೇ ತಾರೀಖಿನ ಶುಕ್ರವಾರದ ಈ ದಿ‌ನ ವರಮಹಾಲಕ್ಷ್ಮಿ ವ್ರತವಾಗಿದೆ. ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಅನುರಾಧ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರವನ್ನು ಇಂದು ಮಾಡಲು ಹೋಗಬೇಡಿ. ನಿಮ್ಮ ಮನಸ್ಸಿಗೆ ಇಂದು ಅಷ್ಟಾಗಿ ನೆಮ್ಮದಿ ಇರುವುದಿಲ್ಲ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ದಾಂಪತ್ಯ ಹಾಗೂ ಮಿತ್ರತ್ವದಲ್ಲಿ ನೆಮ್ಮದಿ ಇರುತ್ತದೆ. ಅದೇ ರೀತಿ ಪಾರ್ಟ್ನರ್‌ ಶಿಪ್ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ.

ಮಿಥುನ ರಾಶಿ: ಇಂದು ಈ ರಾಶಿಗೆ ಇಂದು ಆತ್ಮವಿಶ್ವಾಸ ಹೆಚ್ಚಾಗಿ ಇರುತ್ತದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ. ಅದೇ ಎಲ್ಲದರಲ್ಲೂ ಹುರುಪು ಚೆನ್ನಾಗಿ ಇದ್ದು ಶತ್ರುನಾಶವಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಹಣಕಾಸಿನ ವಿಚಾರವಾಗಿ ಇಂದು ಜಾಗೃತಿ ಅಗತ್ಯವಾಗಿ ಇರುತ್ತದೆ. ಅದೇ ರೀತಿ ಪ್ರೇಮ, ಪ್ರೀತಿ ವಿಚಾರದಲ್ಲಿ ಬೇಸರ ಉಂಟಾಗಬಹುದು

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಮನಸ್ಸಿಗೆ ಸ್ವಲ್ಪ ಕ್ಲೇಷ ಎದುರಾಗುವ ಸಾಧ್ಯತೆ ಇರುತ್ತದೆ. ಕೋರ್ಟ್ ,ಕಛೇರಿ ವ್ಯವಹಾರದಲ್ಲಿ ಇಂದು ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಆತ್ಮವಿಶ್ವಾಸ ಹೆಚ್ಚಾಗಿದ್ದು ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ಬಂಧು- ಬಾಂಧವರಿಂದಲೂ ನೆಮ್ಮದಿ ಸಿಗುತ್ತದೆ.

Vastu Tips: ಮನೆಯಲ್ಲಿ ಇರುವೆಗಳು ಕಾಣಿಸಿದರೆ ಏನರ್ಥ? ಕಪ್ಪು-ಕೆಂಪು ಇರುವೆಗಳು ನೀಡುವ ಶುಭ-ಅಶುಭ ಸಂಕೇತಗಳು ಇವು

ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಹಣದ ವ್ಯಯವಾಗುವ ಸಾಧ್ಯತೆ ಇರುತ್ತದೆ. ಇಂದು ಅಷ್ಟಾಗಿ ಒಳ್ಳೆಯ ದಿನ ಆಗಿರುವುದಿಲ್ಲ.

ವೃಶ್ಚಿಕ ರಾಶಿ: ಈ ರಾಶಿಗೆ ನಿಮ್ಮ ರಾಶಿಯಲ್ಲಿ ಚಂದ್ರ ಇದ್ದಾನೆ‌. ಹೀಗಾಗಿ ಮನಸ್ಸಿಗೆ ಕ್ಲೇಷ ಉಂಟಾಗುವ ಸಾಧ್ಯತೆ ಇರುತ್ತದೆ. ಯಾವುದೇ ಮುಖ್ಯ ನಿರ್ಧಾರ ಇಂದು ಕೈಗೊಳ್ಳಲು ಹೋಗಬೇಡಿ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಆತ್ಮವಿಶ್ವಾಸ ಇಂದು ಕಡಿಮೆ ಇರುತ್ತದೆ. ಪ್ರೀತಿ ಪಾತ್ರರಿಂದಲೂ ಬೇಸರ ಉಂಟಾಗಬಹುದು‌

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಧನ ಆಗಮನವಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಇಂದು ಹೆಚ್ಚಿನ ಯಶಸ್ಸು ಸಿಗುತ್ತದೆ.

ಕುಂಭ ರಾಶಿ: ಈ ರಾಶಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ. ಆದರೂ ನಿಮ್ಮ ಭಾವನೆಗಳಿಗೆ ನೋವಾಗುವ ಸಾಧ್ಯತೆ ಇಂದು ಇರುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದ್ದು ಭಾಗ್ಯೋದಯವಾಗಿರುತ್ತದೆ.‌ ಹಿರಿಯರ ಆಶೀರ್ವಾದ ಪ್ರಾಪ್ತಿಯಾಗಲಿದ್ದು ಅದೃಷ್ಟ ಪರೀಕ್ಷೆ ನಡೆಯುತ್ತಿರುತ್ತದೆ.