ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Horoscope Today January 31st: ಇಂದು ಗುರುವಿನ ಆಡಳಿತ: ಯಾವ ರಾಶಿಗೆ ಒಳಿತು?

ನಿತ್ಯ ಭವಿಷ್ಯ ಜನವರಿ 31, 2026: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು ಮಘೆ ಮಾಸೆ, ಶುಕ್ಷ ಪಕ್ಷದ, ತ್ರಯೋದಶಿ ತಿಥಿ, ಪುನರ್ವಸು ನಕ್ಷತ್ರದ ಜನವರಿ 31ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.

ಸಂಗ್ರಹ ಚಿತ್ರ

ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾ ಯನ ಶಿರದೃತು, ಮಘೆ ಮಾಸೆ, ಶುಕ್ಷ ಪಕ್ಷದ, ಪುರ್ನವಸು ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಪುನರ್ವಸು ನಕ್ಷತ್ರದ ಅಧಿಪತಿ ಗುರು ಆಗಿದ್ದಾನೆ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ತಾಯಿಯ ಆರೋಗ್ಯದ ಬಗ್ಗೆ ಮನಸ್ಸಿಗೆ ಬಹಳನೇ ಕ್ಲೇಷ ಉಂಟಾಗುವ ಸಾಧ್ಯತೆ ಇರುತ್ತದೆ.

ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಸೋಷಿಯಲ್ ಮೀಡಿಯಾ, ಮಾರ್ಕೆಟಿಂಗ್ ವ್ಯವಹಾರ ಮಾಡೋರಿಗೆ ಉತ್ತಮವಾದ ದಿನವಾಗಿದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರು ಸಂಸಾರದ ಬಗ್ಗೆ ಗಮನ ನೀಡಬೇಕಾಗುತ್ತದೆ. ಮನೆಯ ಜವಾಬ್ದಾರಿಗಳು ಇಂದು ಹೆಚ್ಚು ಆಗುತ್ತದೆ. ಯಾರ ಜೊತೆ ನೀವು ವಾಸ ಮಾಡುತ್ತಿದ್ದಿರೋ ಅವರಿಗೆ ನೀವು ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಅತೀ ಉತ್ತಮವಾದ ದಿನ ವಾಗಿದೆ. ಮನಸ್ಸಿಗೆ ಅತೀ ಹೆಚ್ಚಿನ ನೆಮ್ಮದಿ ಸಿಗಲಿದ್ದು ಹಿಂದಿನ ನಾಲ್ಕು ದಿನದಲ್ಲಿ ಇದ್ದ ಮನಸ್ಸಿನ ಎಲ್ಲ ಕ್ಲೇಷ ಮಾಯವಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮಿತ್ರತ್ವದಲ್ಲಿ ಒಡಕು ಕಾಣ ಬಹುದು. ಪಾರ್ಟ್ನರ್ಸ್ ಶಿಪ್ ವ್ಯವಹಾರದಲ್ಲಿ ತೊಂದರೆ ಕಾಡಬಹುದು. ಕಾರ್ಯಕ್ಷೇತ್ರದಲ್ಲಿ ಕೂಡ ಸೋಲನ್ನು ಕಾಣಬಹುದು. ಎರಡು‌ ದಿನ ಯಾವುದೇ ಮುಖ್ಯ ನಿರ್ಧಾರಗಳು ಬೇಡ

Vastu Tips: ಹೊಸ ವರ್ಷಕ್ಕೆ ಮನೆಯ ಕ್ಯಾಲೆಂಡರ್‌ ಬದಲಾಯಿಸಿದ್ರಾ? ಈ ದಿಕ್ಕಿನಲ್ಲೇ ಅಳವಡಿಸಿ

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಇಷ್ಟಾರ್ಥ ಸಿದ್ದಿಯಾಗುತ್ತದೆ. ಗುಂಪು ಕೆಲಸದಿಂದ ಲಾಭವನ್ನು ಗಳಿಸಬಹುದು.

ತುಲಾ ರಾಶಿ: ತುಲಾ ರಾಶಿಗೆ ಕಾರ್ಯಕ್ಷೇತ್ರದ ಜವಾಬ್ದಾರಿಗಳಲ್ಲಿ ಸ್ವಲ್ಪ ತೊಂದರೆ ಕಾಡಬಹುದು. ಆದರೂ ಆತ್ಮವಿಶ್ವಾಸ ದಿಂದ ಯಶಸ್ಸು ಅನ್ನು ಕಾಣುತ್ತೀರಿ

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಇಂದು ಭಾಗ್ಯೋದಯವಾದ ದಿನ ನಿಮ್ಮದು ಆಗುತ್ತದೆ. ಎಲ್ಲರಿಂದಲೂ ನಿಮಗೆ ಗೌರವ ಪ್ರಾಪ್ತಿ ಯಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಇಂದು ಯಾವುದೇ ಮುಖ್ಯವಾದ ನಿರ್ಧಾರಗಳು ಬೇಡ. ನಿಮಗೆ ಬೇಕಾದವರಿಂದ ಯಾವುದೇ ಸಹಕಾರ ನಿಮಗೆ ಸಿಗುವುದಿಲ್ಲ. ಧ್ಯಾನದಿಗಳನ್ನು ಮಾಡಿ ಇಂದು ಸಮಯ ಕಳೆಯಬೇಕು.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನ ವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಎಲ್ಲ ಕಡೆಯಿಂದಲೂ ಸಹಕಾರ ಪ್ರಾಪ್ತಿ ಯಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಶತ್ರುಗಳು ನಿಮ್ಮನ್ನು ಹಿಮ್ಮೆಟ್ಟಬಹುದು. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಆರೋಗ್ಯದಲ್ಲೂ ಸುಧಾರಣೆ ಕಂಡು ಬರುತ್ತದೆ.

ಮೀನ ರಾಶಿ: ಮೀನ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಮಕ್ಕಳ ವಿಚಾರದಲ್ಲಿ ನಿಮಗೆ ಕಿರಿ ಕಿರಿ ಆಗುವ ಸಾಧ್ಯತೆ ಇರುತ್ತದೆ. ಆದರೂ ಕೂಡ ನಿಮ್ಮ ಬುದ್ದಿವಂತಿಕೆಯಿಂದ ಯಶಸ್ಸು ಕಾಣಬಹುದು.