ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Horoscope Today February 2nd: ಇಂದು ಬುಧನ ಪ್ರಭಾವ: ಈ ರಾಶಿಗೆ ಇಂದು ಎಲ್ಲದರಲ್ಲೂ ಸಕಲ ಸೌಭಾಗ್ಯ ಪ್ರಾಪ್ತಿ!

ನಿತ್ಯ ಭವಿಷ್ಯ ಫೆಬ್ರವರಿ 2, 2026: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು ಮಘೆ ಮಾಸೆ, ಕೃಷ್ಣೆ ಪಕ್ಷದ, ಪ್ರತಿಭಾ ತಿಥಿ, ಆಶ್ಲೇಷಾ ನಕ್ಷತ್ರದ ಫೆಬ್ರವರಿ 2ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಈ ರಾಶಿಗೆ ಇಂದು ಧನಲಾಭದ ಸೂಚನೆ!

ಸಂಗ್ರಹ ಚಿತ್ರ -

Profile
Pushpa Kumari Feb 2, 2026 6:00 AM

ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು, ಮಘೆ ಮಾಸೆ, ಕೃಷ್ಣೆ ಪಕ್ಷದ, ಆಶ್ಲೇಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಆಶ್ಲೇಷಾ ನಕ್ಷತ್ರದ ಅಧಿಪತಿ ಬುಧ ಆಗಿದ್ದಾನೆ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ನಿಮ್ಮ ಬುದ್ದಿವಂತಿಕೆಯಿಂದ ಆಸ್ತಿ ಪಾಸ್ತಿ ‌ವಿಚಾರವನ್ನು ನಿಭಾಯಿಸಬೇಕಾಗುತ್ತದೆ. ಸ್ವಲ್ಪ ಕಿರಿ- ಕಿರಿ ಮನೆಯಲ್ಲಿ ಇರಬಹುದು.

ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಆತ್ಮವಿಶ್ವಾಸ ಬಹಳ ಚೆನ್ನಾಗಿ ಇದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮನೆಯ ವಿಚಾರ ಹಾಗೂ ಕಾರ್ಯಕ್ಷೇತ್ರದ ಜವಾಬ್ದಾರಿಯ ಬಗ್ಗೆ ಸ್ವಲ್ಪ ಸಮತೋಲನ‌ ಕಷ್ಟವಾಗಬಹುದು. ಆದರೂ ಕೂಡ ಎಲ್ಲವನ್ನು‌ ನಿಭಾಯಿಸುತ್ತೀರಿ. ಕುಟುಂಬದವರು ಇಂದು ನಿಮಗೆ ಬಹಳ ಪ್ರಮುಖರಾಗುತ್ತಾರೆ.

Vastu Tips: ಮನೆಯಲ್ಲಿ ಸುಗಂಧರಾಜ ಗಿಡವನ್ನು ಈ ದಿಕ್ಕಿನಲ್ಲಿ ನೆಟ್ಟರೆ, ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ!

ಕಟಕ ರಾಶಿ: ಕಟಕ ರಾಶಿ ಅವರಿಗೆ ಅತೀ ಉತ್ತಮವಾದ ದಿನ ವಾಗಿದೆ. ನಿಮ್ಮ ರಾಶಿಗೆ ಚಂದ್ರ ಬಂದಿರುವುದರಿಂದ ಹಿಂದಿನ ಮಾನಸಿಕ ಚಂಚಲತೆಗಳು ಮಾಯವಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರಗಳು ಬೇಡ. ಮೀಟಿಂಗ್, ಯಾವುದೇ ವ್ಯವಹಾರವನ್ನು ಇಂದು ಮಾಡಲು ಹೋಗಬೇಡಿ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಇಷ್ಟಾರ್ಥ ಸಿದ್ದಿಯಾಗುತ್ತದೆ. ಗುಂಪು ಕೆಲಸದಿಂದ ಧನ ಲಾಭವನ್ನು ಗಳಿಸಬಹುದು.

ತುಲಾ ರಾಶಿ: ತುಲಾ ರಾಶಿಗೆ ಕಾರ್ಯಕ್ಷೇತ್ರದ ಜವಾಬ್ದಾರಿಗಳಲ್ಲಿ ಜಾಸ್ತಿಯಾಗಬಹುದು. ಆದರೆ ಬುದ್ದಿವಂತಿಕೆಯಿಂದ ಮಾಡುವ ಕೆಲಸದಲ್ಲಿ ನಿಮಗೆ ಲಾಭ ಸಿಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಇಂದು ಭಾಗ್ಯೋದಯವಾದ ದಿನ ನಿಮ್ಮದು ಆಗುತ್ತದೆ. ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ತೊಂದರೆಗಳು ಬಗೆಹರಿಯುತ್ತದೆ

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಇಂದು ಕ್ಲಿಷ್ಟಕರವಾದ ದಿನವಾಗಿದೆ. ಧ್ಯಾನಧಿಗಳನ್ನು ಮಾಡುವ ಮೂಲಕ ಇಂದು ಪ್ರಗತಿಯನ್ನು ಕಾಣಬಹುದು‌

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಎಲ್ಲ ರೀತಿಯ ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಜಯವನ್ನು ಕಾಣುತ್ತೀರಿ.

ಕುಂಭರಾಶಿ: ಈ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಸಿಗುತ್ತದೆ.

ಮೀನ ರಾಶಿ: ಮೀನ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಮನಸ್ಸಿನ ಸಮತೋಲನವನ್ನು ಕಾಪಾಡಿಕೊಳ್ಳಬೇಕು. ಬಹಳನೇ ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ.