ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Horoscope Today February 3rd: ಬುಧ ಕುಂಭ ರಾಶಿಗೆ ಪ್ರವೇಶ: ಈ ರಾಶಿಗೆ ಇಂದು ಉದ್ಯೋಗದಲ್ಲಿ ಧನಲಾಭ

ನಿತ್ಯ ಭವಿಷ್ಯ ಫೆಬ್ರವರಿ 3, 2026: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು ಮಘೆ ಮಾಸೆ, ಕೃಷ್ಣೆ ಪಕ್ಷದ, ದ್ವಿತೀಯ ತಿಥಿ, ಮಖಾ ನಕ್ಷತ್ರದ ಫೆಬ್ರವರಿ 3ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಇವರಿಗೆ ಇಂದು ವೃತ್ತಿಜೀವನದಲ್ಲಿ ಯಶಸ್ಸು ಪ್ರಾಪ್ತಿ!

ಸಂಗ್ರಹ ಚಿತ್ರ -

Profile
Pushpa Kumari Feb 3, 2026 6:00 AM

ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾ ಯನ ಶಿರದೃತು, ಮಘೆ ಮಾಸೆ, ಕೃಷ್ಣೆ ಪಕ್ಷದ, ಮಖಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ಬುಧ ಕುಂಭ ರಾಶಿಯನ್ನು ಪ್ರವೇಶ ಮಾಡುತ್ತಿದ್ದಾನೆ.‌ ಮೇಷ ರಾಶಿಯವರಿಗೆ ಇಂದು ಅತ್ಯುತ್ತಮ ವಾದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮಿತ್ರರಿಂದ ಬಹಳ‌ ಖುಷಿಯ ದಿನ ನಿಮ್ಮದು ಆಗುತ್ತದೆ. ಅದೇ ರೀತಿ ಧನ ಆಗಮನದ ಸೂಚನೆಗಳು ಕೂಡ ನಿಮಗೆ ಇದೆ.

ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮಾತಿನಿಂದ ಇಂದು ಗೆಲುವನ್ನು ಕಂಡು ಕೊಳ್ಳುತ್ತೀರಿ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಷ್ಟಕರವಾದ ದಿನವಾಗಿದೆ. ನಿಮ್ಮ ವ್ಯಕ್ತಿತ್ವ ಬಗ್ಗೆ ಟೀಕೆಗಳು ಇಂದು ಕೇಳಿ ಬರಬಹುದು. ಹಾಗಾಗಿ ಸಮಾಧಾನದಿಂದ ಇರಬೇಕಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಅತೀ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಇದ್ದ ತೊಂದರೆಗಳು ಬಗೆಹರಿಯಲಿದೆ. ಮನಸ್ಸಿಗೆ ನೆಮ್ಮದಿ ಸಿಗುತ್ತದೆ.

ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ ದಿನ ಭವಿಷ್ಯ:



ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರಗಳು ಬೇಡ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ..ಅದೇ ರೀತಿ ಪಾರ್ಟರ್ನರ್‌ಶಿಪ್‌ ವ್ಯವಹಾರದಲ್ಲೂ ಕಷ್ಟ ಆಗಬಹುದು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಇಷ್ಟಾರ್ಥ ಸಿದ್ದಿಯಾಗುತ್ತದೆ. ಶತ್ರು ನಾಶ ಆಗಲಿದ್ದು ಮಾತಿನಿಂದ ಗೆಲುವು ಸಾಧಿಸಬಹುದು.

Vastu Tips: ಮನೆಯ ಅಂಗಳದಲ್ಲಿ ಚೆಂಡು ಹೂವಿನ ಗಿಡ ನೆಡುವ ಮುನ್ನ ಈ ಸಂಗತಿ ತಿಳಿದಿರಲಿ

ತುಲಾ ರಾಶಿ: ತುಲಾ ರಾಶಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ಅಷ್ಟೊಂದು ನೆಮ್ಮದಿ ಇರುವುದಿಲ್ಲ.ಮಾತಿನಿಂದ ತೊಂದರೆಗಳು ಕಾಡಲಿದ್ದು ಹುಷಾರಾಗಿ ಇರಬೇಕಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಇಂದು ಭಾಗ್ಯೋದಯವಾದ ದಿನ ನಿಮ್ಮದು ಆಗುತ್ತದೆ. ಮನೆಯಲ್ಲಿ ನೆಮ್ಮದಿ ಇದ್ದು ಕಾರ್ಯಕ್ಷೇತ್ರದಲ್ಲಿ ಕೂಡ ಜಯವನ್ನು ಕಾಣುತ್ತೀರಿ.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಇಂದು ಕ್ಲಿಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ವಿಚಾರಗಳಲ್ಲಿ ಬಂಧು- ಬಾಂಧವರಲ್ಲಿ ಕಿರಿಕಿರಿ ಆಗಬಹುದು.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನ ವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಮನೆಯಲ್ಲಿ ಕೂಡ ನೆಮ್ಮದಿಯ ವಾತಾವರಣ ಇರುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ಗೋಚರ ಇರಲಿದೆ. ನಿಮ್ಮ ರಾಶಿಗೆ ಬುಧ ಬರುವುದರಿಂದ ನೀವು ಹೇಳಿದ್ದೆಲ್ಲವೂ ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇರುತ್ತದೆ.

ಮೀನ ರಾಶಿ: ಮೀನ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಮಾತುಗಳನ್ನು ಕಮ್ಮಿ ಮಾಡಬೇಕಾಗುತ್ತದೆ. ಮುಖ್ಯವಾದ ವಿಚಾರದಲ್ಲಿ ಇಂದು ನಿರ್ಧಾರ ತೆಗೆದುಕೊಳ್ಳದೆ ಇರುವುದು ಉತ್ತಮ.