ಬೆಂಗಳೂರು, ಜೂ. 6: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಪಂಚಮಿ ತಿಥಿ, ಶ್ರವಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಮೇಷ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ಧಿಯಾಗಲಿದ್ದು ಧನಾಗಮನದ ಸೂಚನೆ ಇದೆ. ಮಿತ್ರರಿಂದ ಸಹಕಾರ ಸಿಗಲಿದೆ.
ವೃಷಭ ರಾಶಿ: ಈ ರಾಶಿಯವರಿಗೆ ಕಾರ್ಯಕ್ಷೇತ್ರದ ಜವಾಬ್ದಾರಿಗಳು ಹೆಚ್ಚಾಗಬಹುದು. ಪ್ರತಿಷ್ಠೆ ಹೆಚ್ಚಾಗುವ ದಿನ ನಿಮ್ಮದಾಗಲಿದೆ.
ಮಿಥುನ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ನೋವು ಹೆಚ್ಚಾಗಬಹುದು. ನಿಮ್ಮ ಹಿರಿಯರಿಂದ ಧನಾಗಮನವಾಗುವ ಸೂಚನೆ ಇದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟಕದ ದಿನವಾಗಲಿದೆ. ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು. ಹಾಗಾಗಿ ಯಾವುದೇ ಮುಖ್ಯ ನಿರ್ಧಾರಗಳನ್ನು ಕೈಗೊಳ್ಳಲು ಹೋಗಬೇಡಿ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ಬೇರೆಯವರಿಂದ ಉತ್ತಮ ಸಹಕಾರ ಪ್ರಾಪ್ತಿಯಾಗುತ್ತದೆ. ನೀವು ಅಂದುಕೊಂಡ ಕೆಲಸ ಕಾರ್ಯದಲ್ಲಿ ಇಂದು ಜಯ ಲಭ್ಯ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ನೀವು ಮಾಡುವ ಕೆಲಸದಲ್ಲಿ ಜಯ ಸಿಗುತ್ತದೆ. ಅದೇ ರೀತಿ ಶತ್ರುಗಳು ಹಿಮ್ಮೆಟ್ಟಬಹುದು. ಆರೋಗ್ಯದಲ್ಲೂ ಸುಧಾರಣೆ ಕಂಡು ಬರುತ್ತದೆ.
ಸ್ನಾನದ ನಂತರ ಈ ತಪ್ಪುಗಳನ್ನು ಮಾಡಬೇಡಿ ಅನ್ನುತ್ತದೆ ವಾಸ್ತು ಶಾಸ್ತ್ರ
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮನಸ್ಸಿನ ನೋವು ಇಂದು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ದಿ ಶಕ್ತಿ ಉಪಯೋಗಿಸಿಕೊಂಡು ಪರಿಸ್ಥಿತಿಯನ್ನು ಗೆಲ್ಲಬಹುದು.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಮನೆಯ ಜವಾಬ್ದಾರಿ ಹೆಚ್ಚಾಗುವ ಸಾಧ್ಯತೆ ಇದೆ. ಹಾಗೆಯೇ ಆಸ್ತಿ-ಪಾಸ್ತಿ ವಿಚಾರವಾಗಿ ಹೆಚ್ಚಿನ ತೊಂದರೆ ಕಾಣಿಸಿಕೊಳ್ಳಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಮಾಧ್ಯಮ, ಸೋಷಿಯಲ್ ಮೀಡಿಯಾದಲ್ಲಿ ಕೆಲಸ ಮಾಡೋರಿಗೆ ಲಾಭದ ದಿನವಾಗಲಿದೆ. ವ್ಯವಹಾರದಲ್ಲೂ ಯಶಸ್ಸು ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು, ಮನೆಯ ಸಂಸಾರದ ಬಗ್ಗೆ ನೀವು ಯೋಚನೆ ಮಾಡಬೇಕಾಗುತ್ತದೆ.
ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಎಲ್ಲವೂ ಮಾಯವಾಗಲಿದೆ. ಹಾಗೆಯೇ ಮುಂದಿನ ಬದುಕಿಗೆ ಉತ್ತಮ ಮಾರ್ಗದರ್ಶನ ಕೂಡ ಸಿಗಲಿದೆ.
ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಯಾವುದೇ ವ್ಯವಹಾರ ಇಂದು ಮಾಡಲು ಹೋಗಬೇಡಿ.