ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು, ಮಘೆ ಮಾಸೆ, ಕೃಷ್ಣೆ ಪಕ್ಷದ, ದನಿಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ದನಿಷ್ಢ ನಕ್ಷತ್ರ ಇದ್ದು ಅಧಿಪತಿ ಕುಜ ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಧನ ಆಗಮನ ವಾಗುತ್ತದೆ. .
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಭಾಗ್ಯೋದಯ ವಾದ ದಿನವಾಗುತ್ತದೆ. ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಮನಸ್ಸಿಗೆ ಅತೀ ಹೆಚ್ಚಿನ ನೆಮ್ಮದಿ ಸಿಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಉತ್ತಮ ವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿರಿಯರಿಂದ ಅತೀ ಹೆಚ್ಚಿನ ಆಶೀರ್ವಾದ ಪ್ರಾಪ್ತಿಯಾಗುತ್ತದೆ.
Vastu Tips: ಮನೆ ಸ್ವಚ್ಛಗೊಳಿಸುವಾಗ ಪಾಲಿಸಬೇಕು ಕೆಲವು ನಿಯಮ
ಕಟಕ ರಾಶಿ: ಕಟಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ಅಷ್ಟಾಗಿ ನೆಮ್ಮದಿ ಇರುವುದಿಲ್ಲ. ನಿಮ್ಮ ಪ್ರೀತಿ ಪಾತ್ರರಿಂದ ಇಂದು ತೊಂದರೆಯಾಗುವುದು ಇದೆ.
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಅತೀ ಉತ್ತಮವಾದ ದಿನವಾಗಿದೆ. ಬೇರೆಯವರಿಂದ ಉತ್ತಮ ಸಹಕಾರ ಸಿಗುತ್ತದೆ. ಹಾಗಾಗಿ ಅಂದುಕೊಂಡ ಕೆಲಸ ಕಾರ್ಯಗಳು ಪೂರ್ಣ ಗೊಳ್ಳುತ್ತವೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದ್ದು ಸಾಮಾಜಿಕ ಚಟುವಟಿಕೆ ಗಳಲ್ಲಿ ಯಶಸ್ಸು ಸಿಗುತ್ತದೆ. ಶತ್ರುಗಳನ್ನು ಕೂಡ ಹಿಮ್ಮೆಟ್ಟಬಹುದು.
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಜಾಸ್ತಿಯಾಗಬಹುದು. ಹಣ ಕಳೆದು ಕೊಳ್ಳುವ ಸಾಧ್ಯತೆಗಳು ಇಂದು ಜಾಸ್ತಿ ಇರಬಹುದು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಆಸ್ತಿ- ಪಾಸ್ತಿ ವಿಚಾರವಾಗಿ ಹಾಗೂ ತಾಯಿಯ ಆರೋಗ್ಯ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮಾದ್ಯಮದಲ್ಲಿ ,ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಉತ್ತಮವಾದ ದಿನವಾಗಿದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮನೆಯವರ ಜೊತೆ ಖುಷಿಯಿಂದ ದಿನ ಕಳೆಯುತ್ತೀರಿ.ಹಾಗಾಗಿ ಕುಟುಂಬದ ಜೊತೆ ನೆಮ್ಮದಿ ಯಿಂದ ಇರುತ್ತೀರಿ.
ಕುಂಭರಾಶಿ: ಈ ರಾಶಿಯವರಿಗೆ ಹಿಂದಿನ ಎರಡು ಮೂರು ದಿನಗಳ ಬೇಸರ ಎಲ್ಲವೂ ಮಯ ವಾಗುತ್ತದೆ. ಖುಷಿಯಾಗಿ ಸಮಯ ಕಳೆಯುತ್ತೀರಿ
ಮೀನ ರಾಶಿ: ಮೀನ ರಾಶಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ .ಆರೋಗ್ಯದಲ್ಲಿ ಗಮನ ಇರಲಿ.ಆಧ್ಯಾತ್ಮಿಕ ಒಲವು ಹೆಚ್ಚಿದ್ದರೆ ಒಳಿತು.