ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಆಗಸ್ಟ್‌ 31, 2026: ಈ ರಾಶಿಗೆ ಒಲಿಯಲಿದೆ ಇಂದು ಭಾರೀ ಅದೃಷ್ಟ!

Horoscope Today August 31st: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ, ರೇವತಿ ನಕ್ಷತ್ರದ, ಆಗಸ್ಟ್ 31ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ರೇವತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಾತಿನಲ್ಲಿ ಇತರರ ಜೊತೆ ತೊಂದರೆಗೆ ಸಿಲುಕಬಹುದು. ಕೆಲಸ ಕಾರ್ಯದಲ್ಲೂ ಏನು ಚೈತನ್ಯ ಇಲ್ಲದಂತೆ ಭಾಸವಾಗಬಹುದು.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರ ವನ್ನು ಇಂದು ಕೈಗೊಳ್ಳಲು ಹೋಗಬೇಡಿ. ಧನ ವ್ಯಯ ಆಗುಗ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಗ್ಯ ಸಮಸ್ಯೆಯ ಬಗ್ಗೆ ಗಮನ ನೀಡಬೇಕಾಗುತ್ತದೆ.

ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ನಿಮ್ಮದಾಗುತ್ತದೆ. ಆದರೆ ನೀವು ಆಡುವ ಮಾತಿನಲ್ಲಿ ಇಂದು ನಿಗಾ ವಹಿಸಿದರೆ ಉತ್ತಮ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಆದರೆ ಹಿರಿಯರ ಜೊತೆ ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟಕರವಾದ ದಿನ ಆಗಿ ಇರುತ್ತದೆ. ಮುಖ್ಯ ನಿರ್ಧಾರ ಯಾವುದೇ ಮಾಡಲು ಹೋಗಬೇಡಿ. ದಾಂಪತ್ಯದಲ್ಲೂ ತೊಂದರೆ ಎದುರಾಗುವ ಸಾಧ್ಯತೆ ಇರುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಎಲ್ಲ ಕೆಲಸ ಕಾರ್ಯದಲ್ಲೂ ಯಶಸ್ಸು ಸಿಗುತ್ತದೆ. ಮಿತ್ರರು ಹಾಗೂ ಪ್ರೀತಿ ಪಾತ್ರರು ನಿಮಗೆ ಬೇಕಾದ ಸಹಕಾರ ನೀಡುತ್ತಾರೆ.

Vastu Tips: ಮನೆಯಲ್ಲಿ ನೀರಿನ ಟ್ಯಾಂಕ್ ಅನ್ನು ಯಾವ ದಿಕ್ಕಿನಲ್ಲಿಡಬೇಕು? ಈ ಕುರಿತು ಪಾಲಿಸಬೇಕಾದ ವಾಸ್ತು ನಿಯಮಗಳು ಇವು

ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಸಾಮಾಜಿಕವಾಗಿ ಅತೀ ಹೆಚ್ಚಿನ ಯಶಸ್ಸು,ಅಭಿವೃದ್ಧಿ ನೀವು ಕಾಣುತ್ತೀರಿ.

ವೃಶ್ಚಿಕ ರಾಶಿ: ಈ ರಾಶಿಗೆ ಮಿಶ್ರ ಫಲ ಕೊಡುವ ದಿನವಾಗಿದೆ. ಸೋಶಿಯಲ್ ಮೀಡಿಯಾ, ಭಾಷಣಕಾರರು, ಮಾತುಗಾರರಿಗೆ ಲಾಭದಾಯಕವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿಯೂ ಲಾಭದಾಯಕವಾಗಿದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮ ದಿನವಾಗಿದೆ. ವೈಯಕ್ತಿಕವಾಗಿ ಕೆಲವು ವಿಚಾರದಲ್ಲಿ ತೊಂದರೆ ಎದುರಾಗಬಹುದು. ರಿಯಲ್ ಎಸ್ಟೇಟ್, ಬಿಸಿನೆಸ್ ವ್ಯವಹಾರದಲ್ಲಿ ಜಾಗೃತಿ ಅಗತ್ಯ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಸೇಲ್ಸ್ ಮಾರ್ಕೆಟಿಂಗ್ ವ್ಯವಹಾರದಲ್ಲಿ ಹೆಚ್ಚಿನ ಯಶಸ್ಸು ನಿಮ್ಮದಾಗುತ್ತದೆ.

ಕುಂಭ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮನೆಯ ವಿಚಾರ ಹಾಗೂ ಕುಟುಂಬದ ವಿಚಾರವಾಗಿ ಜಾಗರೂಕತೆಯಿಂದ ಇರಬೇಕಾಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ‌. ಯಾವುದೇ ರೀತಿಯ ಅಡಚಣೆಗಳು ಎದುರಾಗುವುದಿಲ್ಲ. ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ನಿಮ್ಮದಾಗುತ್ತದೆ.