Horoscope Today February 13th: ಕೇತುವಿನ ಪ್ರಭಾವದಿಂದ ಯಾವ ರಾಶಿಗೆ ಒಳಿತಾಗಲಿದೆ?
ನಿತ್ಯ ಭವಿಷ್ಯ ಫೆಬ್ರವರಿ 13, 2026: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು ಮಘೆ ಮಾಸೆ, ಕೃಷ್ಣೆ ಪಕ್ಷದ, ಏಕಾದಶಿ ತಿಥಿ, ಮೂಲ ನಕ್ಷತ್ರದ ಫೆಬ್ರವರಿ 13ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ..
ದಿನ ಭವಿಷ್ಯ -
ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು, ಮಘೆ ಮಾಸೆ, ಕೃಷ್ಣೆ ಪಕ್ಷದ, ಮೂಲ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ಮೂಲ ನಕ್ಷತ್ರ ಇದ್ದು ಅಧಿಪತಿ ಕೇತು ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಅತ್ಯುತ್ತಮವಾದ ದಿನವಾಗಿದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಹಿಂದಿನ ಎರಡು ಮೂರು ದಿನಗಳ ಮನಸ್ಸಿನ ಕ್ಲೇಷ ಎಲ್ಲವೂ ಇಂದು ಮಾಯವಾಗುತ್ತದೆ
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ಸಂಬಂಧದಲ್ಲಿ ಕಲಹ ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಉತ್ತಮ ವಾದ ದಿನವಾಗಿದೆ. ಎಲ್ಲ ರೀತಿಯಲ್ಲಿ ಇಂದು ಸಹಕಾರ ಪ್ರಾಪ್ತಿ ಯಾಗುತ್ತದೆ. ಹಿಂದಿನ ದಿನದಲ್ಲಿ ಇದ್ದ ಎಲ್ಲ ಕ್ಲೇಷ ಮಾಯವಾಗುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ನಿಮ್ಮದು ಆಗುತ್ತದೆ.
Vastu Tips: ನಿಮ್ಮ ಮನೆಯ ವಾಶ್ ರೂಮ್‌ನಲ್ಲಿರುವ ಈ ಬಣ್ಣದ ಬಕೆಟ್ ವಾಸ್ತುದೋಷಕ್ಕೆ ಕಾರಣವಾಗಬಹುದು ಎಚ್ಚರ
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನ ವಾಗಿದೆ. ನಿಮ್ಮ ಪ್ರೀತಿ ಪಾತ್ರರ ಜೊತೆ ಕಲಹ ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಯಾವುದೇ ವ್ಯವಹಾರಗಳು ಇಂದು ಬೇಡ.
ಕನ್ಯಾ ರಾಶಿ: ಕನ್ಯಾ ರಾಶಿಯವರು ತಾಯಿಯ ಆರೋಗ್ಯ, ಮನೆಯ ನೆಮ್ಮದಿಯ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ. ಸಂಸಾರದ ಜವಾಬ್ದಾರಿಗಳೇ ಇಂದು ಹೆಚ್ಚು ಇರುತ್ತದೆ
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಮಾಧ್ಯಮ, ಮಾರ್ಕೆಟಿಂಗ್ ವ್ಯವಹಾರದಲ್ಲಿ ಇರೋರಿಗೆ ಲಾಭದಾಯಕವಾಗಿದೆ
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ಗೋಚರ ಇರಲಿದೆ. ಅದರ ಜೊತೆ ಸಂಸಾರದ ಬಗ್ಗೆ ಹೆಚ್ಚಿನ ಗಮನವನ್ನು ನೀವು ಇಂದು ನೀಡಬೇಕಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಅತ್ಯುತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ಎರಡು ಮೂರು ದಿನದ ಕ್ಲೇಷ ಎಲ್ಲವೂ ಮಾಯವಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ಕ್ಲೇಷ ತರುವ ದಿನವಾಗಿದ್ದು ಯಾವುದೇ ಮುಖ್ಯ ನಿರ್ಧಾರ ಮಾಡಲು ಹೋಗಬೇಡಿ.
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮಿತ್ರರಿಂದ ಧನ ಆಗಮನವಾಗಲಿದೆ
ಮೀನ ರಾಶಿ: ಮೀನ ರಾಶಿಗೆ ಕಾರ್ಯಕ್ಷೇತ್ರದ ಜವಾಬ್ದಾರಿ ಹೆಚ್ಚಾಗುತ್ತದೆ. ಆದರೂ ಕೂಡ ಎಲ್ಲವನ್ನು ನಿಭಾಯಿಸುವ ಶಕ್ತಿ ನಿಮ್ಮಲ್ಲಿ ಇರುತ್ತದೆ.