ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಮೇ 3, 2026: ಇಂದು ಆರ್ಥಿಕ ಲಾಭ, ಕೆಲಸ-ಕಾರ್ಯದಲ್ಲಿ ಮುನ್ನಡೆ

Horoscope Today May 3: ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷ, ದ್ವಿತೀಯ ತಿಥಿ, ಅನುರಾಧ ನಕ್ಷತ್ರದ ಮೇ 3ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂದು ಈ ರಾಶಿಯವರು ಮುಟ್ಟಿದ್ದೆಲ್ಲ ಚಿನ್ನ

ಇಂಟರ್‌ನೆಟ್ ಚಿತ್ರ -

Profile
Pushpa Kumari May 3, 2026 6:00 AM

ಬೆಂಗಳೂರು, ಮೇ 3: ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ದ್ವೀತಿಯ ತಿಥಿ, ಅನುರಾಧ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಮೇಷ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಯಾವುದೇ ಮುಖ್ಯ ಇಮೇಲ್ ಸಂದೇಶ ಕಳುಹಿಸಬೇಡಿ. ಎರಡು ದಿನ ತಾಳ್ಮೆಯಿಂದ ಕಾಯುವುದು ಒಳಿತು.

ವೃಷಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಎಲ್ಲ ರೀತಿಯಿಂದಲೂ ನಿಮಗೆ ಸಹಕಾರ ಪ್ರಾಪ್ತಿಯಾಗುತ್ತದೆ. ದಾಂಪತ್ಯದಲ್ಲೂ ನೆಮ್ಮದಿ ಇದ್ದು ಪಾರ್ಟನರ್‌ಶಿಪ್‌ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ.

ಮಿಥುನ ರಾಶಿ: ಮಿಥುನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಲಿದ್ದು, ಕೆಲಸ ಕಾರ್ಯದಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಎಲ್ಲ ಕೆಲಸ ಕಾರ್ಯದಲ್ಲೂ ಇಂದು ಮುನ್ನಡೆ ಸಾಧಿಸಬಹುದು.

ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಆಸ್ತಿ ಪಾಸ್ತಿ ಹಾಗೂ ವ್ಯವಹಾರದಲ್ಲಿ ಸಮಸ್ಯೆ ಉಂಟಾಗಬಹುದು. ಮಕ್ಕಳಿಂದ ಪೋಷಕರಿಗೆ ಇಂದು ಸ್ವಲ್ಪ ಕಿರಿಕಿರಿ ಉಂಟಾಗಬಹುದು.

ಸಿಂಹ ರಾಶಿ: ಈ ರಾಶಿಯವರ ಮನಸ್ಸಿಗೆ ಬೇಸರ ಕವಿಯಲಿದೆ. ಸಂಸಾರದಲ್ಲಿ, ಕೆಲಸ ಕಾರ್ಯದಲ್ಲಿ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು, ಸಹೋದರ ಸಹೋದರಿಯರಿಂದ ಖುಷಿ ಸಿಗಬಹುದು.

ಶೌಚಾಲಯ ಮನೆಯ ಯಾವ ದಿಕ್ಕಿನಲ್ಲಿ ಇರಬೇಕು? ವಾಸ್ತು ನಿಯಮ ತಪ್ಪಿದ್ರೆ ಸಮಸ್ಯೆ ಕಾಡೋದು ಖಂಡಿತಾ!

ತುಲಾ ರಾಶಿ: ತುಲಾ ರಾಶಿಯವರಿಗೆ ಸಂಸಾರದ ತಾಪತ್ರಯಗಳು ಜಾಸ್ತಿ ಆಗಬಹುದು. ಎಲ್ಲರ ಜತೆ ವಿನಯ ಪೂರ್ವಕವಾಗಿ ನಡೆದುಕೊಂಡರೆ ಉತ್ತಮ.

ವೃಶ್ಚಿಕ ರಾಶಿ: ಈ ರಾಶಿಯವರ ಪಾಲಿಗೆ ಇಂದು ಉತ್ತಮ ದಿನವಾಗಲಿದೆ. ಎಲ್ಲ ಕೆಲಸ ಕಾರ್ಯದಲ್ಲೂ ಯಶಸ್ಸು ಸಿಗಲಿದೆ.‌ ಖುಷಿಯಿಂದ ದಿನ ಕಳೆಯಲಿದ್ದೀರಿ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಇಂದು ಯಾವುದೇ ಮುಖ್ಯ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಯಾವುದೇ ವ್ಯವಹಾರಕ್ಕೆ ಕೈ ಹಾಕಬೇಡಿ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಧನಾಮನದ ಸೂಚನೆ ಇದೆ.

ಕುಂಭ ರಾಶಿ: ಈ ರಾಶಿಯವರಿಗೆ ಇಂದು ಶುಭ ದಿನವಾಗಲಿದೆ. ಹೆಚ್ಚಿನ ಲಾಭವನ್ನು ಗಳಿಸುವ ದಿನವೂ ಹೌದು.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಸಮಸ್ಯೆ ಪರಿಹಾರವಾಗಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಕೆಲಸ ಕಾರ್ಯದಲ್ಲೂ ಯಶಸ್ಸು ಸಿಗಲಿದೆ.