ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಸೆಪ್ಟೆಂಬರ್ 12, 2026: ಹೊಸ ಅವಕಾಶಗಳು ನಿಮ್ಮನ್ನು ಅರಸಿ ಬರಲಿದೆ

Horoscope Today September 12th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಕೃಷ್ಣೆಪಕ್ಷದ, ಅಮಾವಾಸ್ಯ ತಿಥಿಯ, ಉತ್ತರ ಫಾಲ್ಗುಣ ನಕ್ಷತ್ರದ ಸೆಪ್ಟೆಂಬರ್‌ 12ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವ ಮಾಹಿತಿ ಇಲ್ಲಿದೆ.

ಇಂಟರ್‌ನೆಟ್ ಚಿತ್ರ

ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.

ಮೇಷ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕೆಲಸದಲ್ಲಿ ಯಶಸ್ಸು ಸಿಗಲಿದ್ದು, ಹೊಸ ಅವಕಾಶಗಳು ಒದಗಿ ಬರಬಹುದು. ಕುಟುಂಬದಲ್ಲಿ ಸಂತೋಷ, ನೆಮ್ಮದಿ ಇರಲಿದೆ.

ವೃಷಭ ರಾಶಿ: ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ಕುಟುಂಬದ ಜತೆ ಸಮಯ ಕಳೆಯಲು ಇಂದು ಉತ್ತಮ ಅವಕಾಶ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ.

ಮಿಥುನ: ಹೊಸ ಯೋಜನೆಗಳಿಗೆ ಚಾಲನೆ ನೀಡಲು ಉತ್ತಮ ದಿನವಾಗಲಿದೆ. ನಿಮ್ಮ ಬುದ್ದಿವಂತಿಕೆ ಮೂಲಕ ಇಂದು ಎಲ್ಲವನ್ನು ನೀವು ಜಯಿಸುತ್ತೀರಿ.

ಕಟಕ ರಾಶಿ: ಕುಟುಂಬದ ವಿಚಾರದಲ್ಲಿ ಮಹತ್ವದ ನಿರ್ಧಾರ ಇಂದು ಕೈಗೊಳ್ಳತ್ತೀರಿ. ಆದರೆ ಇಂದು ಖರ್ಚು ವೆಚ್ಚವನ್ನು ನಿಯಂತ್ರಿಸಿದರೆ ಉತ್ತಮ‌.

ಸಿಂಹ ರಾಶಿ: ವೃತ್ತಿಯಲ್ಲಿ ಉತ್ತಮ ಬೆಳವಣಿಗೆ ಕಂಡು ಬರುತ್ತದೆ. ಮೇಲಾಧಿಕಾರಿಗಳಿಂದ ಪ್ರಶಂಸೆ ಕೂಡ ಸಿಗುತ್ತದೆ. ಆದರೆ ಹಣಕಾಸಿನ ವಿಚಾರದಲ್ಲಿ ಇಂದು ಗಮನಹರಿಸುವುದು ಅಗತ್ಯ.

ಕನ್ಯಾ ರಾಶಿ: ಈ ರಾಶಿಯವರಿಗೆ ಇಂದು ಕೆಲಸದ ಒತ್ತಡ ಹೆಚ್ಚಾಗಬಹುದು. ಆದರೆ ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನವಾಗಿದ್ದು, ಆರೋಗ್ಯಲ್ಲಿ ಸುಧಾರಣೆ ಕಂಡು ಬರಲಿದೆ.

ತುಲಾ ರಾಶಿ: ಈ ರಾಶಿಯವರಿಗೆ ಇಂದು ದಾಂಪತ್ಯ ಜೀವನ ಸುಖವಾಗಿರುತ್ತದೆ. ಅದೇ ತಿ ಹೊಸ ಪರಿಚಯಗಳು ಲಾಭ ತರಬಹುದು.

ಮನೆಯ ಮುಖ್ಯ ಬಾಗಿಲು ಹೀಗಿದ್ದರೆ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ!

ವೃಶ್ಚಿಕ ರಾಶಿ: ನೀವು ಕೈಗೊಂಡ ಕೆಲಸ ಕಾರ್ಯಗಳು ಯಶಸ್ವಿಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ.

ಧನು ರಾಶಿ: ಈ ರಾಶಿಯವರ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಹಾಗೂ ಅಭಿವೃದ್ಧಿಯನ್ನು ನೀವು ಕಾಣುತ್ತೀರಿ.

ಮಕರ ರಾಶಿ: ಉದ್ಯೋಗದಲ್ಲಿ ಬದಲಾವಣೆ ಅಥವಾ ಹೊಸ ಜವಾಬ್ದಾರಿ ಸಿಗಬಹುದು. ಆದರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕುಂಭ ರಾಶಿ: ಈ ರಾಶಿಯವರಿಗೆ ಹಳೆಯ ಸಾಲ ಇಂದು ವಸೂಲಿಯಾಗುತ್ತದೆ. ಮಕ್ಕಳ ಭವಿಷ್ಯದ ಬಗ್ಗೆ ಇಂದು ಒಳ್ಳೆಯ ನಿರ್ಧಾರ ಕೈಗೊಳ್ಳುತ್ತೀರಿ‌.

ಮೀನ ರಾಶಿ: ಮನಸ್ಸಿನ ಗೊಂದಲ ದೂರವಾಗಬಹುದು. ಕೆಲಸದಲ್ಲಿ ಯಶಸ್ಸು ಸಿಗಲಿದೆ. ಆದರೆ ಅನಗತ್ಯ ಖರ್ಚು ತಪ್ಪಿಸಿ.