ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ ಫೆಬ್ರವರಿ 16, 2026: ಸುಖ-ಸಮೃದ್ಧಿಯ ಜತೆಗೆ ಕೆಲಸದಲ್ಲೂ ಯಶಸ್ಸು

Horoscope Today February 16: ವಿಶ್ವವಸು ನಾಮ ಸಂವತ್ಸರದ, ಉತ್ತರಾಯನ, ಶರದೃತು ಮಘೆ ಮಾಸೆ, ಕೃಷ್ಣೆ ಪಕ್ಷ, ಚತುರ್ದಶಿ ತಿಥಿ, ಶ್ರಾವಣ ನಕ್ಷತ್ರದ ಫೆಬ್ರವರಿ 16ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂಟರ್‌ನೆಟ್‌ ಚಿತ್ರ

ಬೆಂಗಳೂರು, ಫೆ. 16: ವಿಶ್ವವಸು ನಾಮ ಸಂವತ್ಸರದ, ಉತ್ತರಾಯನ ಶರದೃತು, ಮಘೆ ಮಾಸೆ, ಕೃಷ್ಣೆ ಪಕ್ಷ, ಶ್ರವಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಮೇಷ ರಾಶಿ: ಇಂದು ಶ್ರವಣ ನಕ್ಷತ್ರ ಇದ್ದು, ಇದರ ಅಧಿಪತಿ ಚಂದ್ರ. ಹಾಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಭಾವುಕತೆ ಹೆಚ್ಚಾಗಿಯೇ ಇರುತ್ತದೆ. ಆದ್ದರಿಂದ ವಿನಯತೆಯಿಂದ ಇರಬೇಕಾಗುತ್ತದೆ. ತಾಳ್ಮೆಯಿಂದ ಎಲ್ಲವನ್ನು ನಿಭಾಯಿಸಬೇಕಾಗುತ್ತದೆ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಅದೃಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು, ಹಿರಿಯರಿಂದ ಹೆಚ್ಚಿನ ಆಶೀರ್ವಾದ ಸಿಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರ ಮನಸ್ಸಿನ ಕ್ಷೇಷ ಹೆಚ್ಚಾಗಲಿದೆ. ಧ್ಯಾನಾದಿಗಳನ್ನು ಮಾಡಿ ಸಮಯ ಕಳೆಯಬೇಕಾಗುತ್ತದೆ.

ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಎಲ್ಲ ರೀತಿನಿಂದಲೂ ನಿಮಗೆ ಜಯವಾಗುತ್ತದೆ. ಅದೇ ರೀತಿ ಪ್ರೀತಿ ಪಾತ್ರರಿಂದಲೂ ಸಹಕಾರ ಪ್ರಾಪ್ತಿಯಾಗುತ್ತದೆ.

ಕನಸಿನ ಉದ್ಯೋಗ ಪಡೆಯಲು ಈ ನಿಯಮಗಳನ್ನು ಪಾಲಿಸಿ

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಸಿಗುತ್ತದೆ. ಆದರೆ ಈ ದಿನ ಹೆಚ್ಚಿನ ಭಾವುಕತೆಯಲ್ಲಿ ನೀವು ಇರುತ್ತೀರಿ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತೀ ಉತ್ತಮ ದಿನವಾಗಲಿದ್ದು, ಮನಸ್ಸಿಗೆ ನೆಮ್ಮದಿ ಇರುತ್ತದೆ. ಪ್ರೀತಿ ಪಾತ್ರರಿಂದ, ಮಕ್ಕಳಿಂದ ಅತೀ ಹೆಚ್ಚಿನ ನೆಮ್ಮದಿಯನ್ನು ನೀವು ಕಾಣುತ್ತೀರಿ. ಆದರೆ ಹಣಕಾಸಿನ ವಿಚಾರದಲ್ಲಿ ಕಿರಿಕಿರಿ ಎದುರಾಗುವ ಸಾಧ್ಯತೆ ಇದೆ.

ತುಲಾ ರಾಶಿ: ತುಲಾ ರಾಶಿಯವರು ತಾಯಿಯ ಆರೋಗ್ಯ, ಮನೆಯ ಬಗ್ಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಸಂಸಾರದ ಗೋಜಿನಲ್ಲಿಯೇ ಇಂದು ದಿನ ಕಳೆಯಬೇಕಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮ ದಿನವಾಗಲಿದೆ. ಮಾಧ್ಯಮ, ಮಾರ್ಕೆಟಿಂಗ್ ವ್ಯವಹಾರ ಮಾಡೋರಿಗೆ ಲಾಭದಾಯಕ ದಿನವಾಗಲಿದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಸಂಸಾರದ ತಾಪತ್ರಯ ಇಂದು ಜಾಸ್ತಿಯಾಗುತ್ತದೆ. ಹಣಕಾಸಿನ ವ್ಯವಹಾರದ ಬಗ್ಗೆಯೂ ಕೂಡ ಯೋಚನೆ ಮಾಡಬೇಕಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ಎರಡು ಮೂರು ದಿನಗಳ ಕ್ಷೇಷ ಪರಿಹಾರವಾಗಲಿದೆ.

ಕುಂಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ನಿರ್ಧಾರಗಳು ಯಾವುದೇ ಬೇಡ. ಎರಡು ದಿನದವರೆಗೆ ತಾಳ್ಮೆಯಿಂದ ಕಾಯುವುದು ಒಳಿತು‌.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು, ಇಷ್ಟಾರ್ಥ ಸಿದ್ದಿಯಾಗಲಿದೆ. ಮಿತ್ರರಿಂದ ನೆಮ್ಮದಿ ಸಿಗುತ್ತದೆ.