ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಪುನರ್ವಸು ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಯಾವುದೇ ಮುಖ್ಯ ನಿರ್ಧಾರ ಕೈಗೊಳ್ಳಲು ಹೋಗಬೇಡಿ. ಅದೇ ರೀತಿ ಮನೆಯಲ್ಲಿ ಸ್ವಲ್ಪ ಕಷ್ಟದ ವಾತಾವರಣ ಇರಲಿದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಬಂಧು ಮಿತ್ರರಿಂದ ಉತ್ತಮ ಒಡನಾಟದಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನೆಯಲ್ಲಿ ಶುಭ- ಸಮಾರಂಭಗಳು ಕೈಗೂಡಬಹುದು. ಅದೇ ರೀತಿ ಧನಾಗಮನದ ಸೂಚನೆ ಕೂಡ ಇದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ವೈಯಕ್ತಿಕವಾಗಿ ಕೆಲವೊಂದು ವಿಚಾರವನ್ನು ಕೂಲಂಕಷವಾಗಿ ಪರಿಶೀಲಿಸಬೇಕಾಗುತ್ತದೆ. ಯಾವುದೇ ಕೆಲಸ ಮಾಡುವಾಗ ಯೋಚಿಸಿ ನಿರ್ಧಾರ ಕೈಗೊಳ್ಳಿ.
ಮನೆಯಲ್ಲಿ ನೀರಿನ ಟ್ಯಾಂಕ್ ಅನ್ನು ಯಾವ ದಿಕ್ಕಿನಲ್ಲಿಡಬೇಕು?
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಮಿತ್ರತ್ವದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ. ಹಣಕಾಸಿನ ವಿಚಾರ ಹಾಗೂ ಆರೋಗ್ಯದಲ್ಲಿ ನೀವು ಜಾಗೃತೆ ವಹಿಸಬೇಕಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ಗೋಚರ ಇರಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು, ಕಾರ್ಯಕ್ಷೇತ್ರದಲ್ಲಿ ಯಶಸ್ಸು ಕಾಣುತ್ತೀರಿ. ಧನಾಗಮನದ ಸೂಚನೆ ಕೂಡ ಇದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ತೊಂದರೆ ಕಾಡಬಹುದು. ನೀವು ಮಾಡಲೇ ಬೇಕಾದ ಕೆಲಸದ ಬಗ್ಗೆ ಸರಿಯಾದ ರೀತಿಯಲ್ಲಿ ಯೋಚಿಸಿ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮದುವೆಯಾಗದೆ ಇದ್ದವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ದಾಂಪತ್ಯ ಜೀವನದಲ್ಲೂ ನೆಮ್ಮದಿ ಸಿಗಲಿದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇಲ್ಲದೆ ಮುಖ್ಯವಾದ ವಿಚಾರದಲ್ಲಿ ಅಡಚಣೆಗಳು ಎದುರಾಗಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ನೆಮ್ಮದಿ. ಸಾಂತಾನ ಭಾಗ್ಯದ ಯೋಗ ಇದೆ.
ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಬಹುದು. ನಿಮ್ಮ ಆಲೋಚನೆಗಳು ಇತರರಿಗೆ ವಿರುದ್ಧವಾಗಿರಲಿದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಧನ ಲಾಭ ಹಾಗೂ ಪ್ರತಿಷ್ಠೆ ಹೆಚ್ಚಾಗಬಹುದು. ದಾಂಪತ್ಯದಲ್ಲೂ ನೆಮ್ಮದಿ ಸಿಗುತ್ತದೆ.