ದಿನ ಭವಿಷ್ಯ, ಜುಲೈ 20, 2026: ಇಂದು ಶ್ರೀಮಂತರಾಗುವ ಯೋಗ, ಜವಾಬ್ದಾರಿ ಹೆಚ್ಚಳ
Horoscope Today July 20th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಷಷ್ಠಿ ತಿಥಿ, ಹಸ್ತ ನಕ್ಷತ್ರದ ಜುಲೈ 20ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಹಸ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗಲಿದ್ದು, ಶತ್ರು ನಾಶವಾಗಲಿದೆ.
ವೃಷಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಸ್ವಲ್ಪ ತೊಂದರೆ ಎದುರಾಗಬಹುದು. ಹಾಗೆಯೇ ಹಣಕಾಸಿನ ವಿಚಾರದಲ್ಲೂ ಸಮಸ್ಯೆ ಉಂಟಾಗಬಹುದು.
ಮಿಥುನ ರಾಶಿ: ಇಂದು ಈ ರಾಶಿಯವರು ಆಸ್ತಿ ಪಾಸ್ತಿ ಹಾಗೂ ತಾಯಿಯ ಆರೋಗ್ಯ ಬಗ್ಗೆ ಗಮನ ನೀಡಬೇಕಾಗುತ್ತದೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿರುವವರ ಮೇಲೆ ಹೆಚ್ಚಿನ ಜಬಾಬ್ದಾರಿ ಇರಲಿದೆ.
ಈ ವಾಸ್ತು ನಿಯಮಗಳನ್ನು ಪಾಲಿಸಿದ್ರೆ ಮನೆಯಲ್ಲಿ ಅತ್ತೆ-ಸೊಸೆ ಜಗಳವೇ ಇರೊಲ್ಲ!
ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗುತ್ತದೆ. ಹಾಗೆಯೇ ಬಂಧು ಬಾಂಧವರಿಂದ ನೆಮ್ಮದಿ ಸಿಗಲಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಸಂಸಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಹಾಗೆಯೆ ಆರ್ಥಿಕ ಸುಭದ್ರತೆ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಎರಡು ಮೂರು ದಿನಗಳಿಂದ ಕಾಡಿದ ತೊಂದರೆ ಪರಿಹಾರವಾಗಲಿದೆ.
ವಿಡಿಯೋ ನೋಡಿ:
ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಪ್ರೀತಿ ಪಾತ್ರರಲ್ಲಿ ತೊಂದರೆ ಹಾಗೂ ಮುಖ್ಯ ಸಂಬಂಧದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಪ್ರಗತಿ ಕಾಣುತ್ತೀರಿ. ಗುಂಪು ಕೆಲಸದಲ್ಲಿ ಯಶಸ್ಸು ಕಾಣುತ್ತೀರಿ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ಧಿಯಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಪ್ರಗತಿ ಹಾಗೂ ಗೌರವ ದೊರೆಯುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ದಿನದಲ್ಲಿ ಇದ್ದ ತೊಂದರೆ ಎಲ್ಲವೂ ಮಾಯವಾಗುತ್ತದೆ.
ಕುಂಭರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಪ್ರೀತಿ ಪಾತ್ರರ ಸಹಕಾರ ಸಿಗುವುದಿಲ್ಲ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸದಲ್ಲಿ ಯಶಸ್ಸು, ದಾಂಪತ್ಯದಲ್ಲಿ ನೆಮ್ಮದಿ ಸಿಗುತ್ತದೆ. ಸಹೋದ್ಯೋಗಿಗಳಿ ನೆರವಿನ ಹಸ್ತ ಚಾಚಲಿದ್ದಾರೆ.