ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಜುಲೈ 6, 2026: ಈ ರಾಶಿಗೆ ಇಂದು ನಷ್ಟ! ಬಿಸೆನೆಸ್ ವ್ಯವಹಾರಕ್ಕೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಚ್ಚರ

Horoscope Today July 6th ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಷಷ್ಠಿ ತಿಥಿ, ಪೂರ್ವ ಭಾದ್ರಪದ ನಕ್ಷತ್ರದ, ಜುಲೈ 6ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ!

ಇಂಟರ್ ನೆಟ್ ಚಿತ್ರ -

Profile
Pushpa Kumari Jul 6, 2026 6:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ,ಪೂರ್ವ ಭಾದ್ರಪದ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ:ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಬಿಸೆನೆಸ್ ವ್ಯವಹಾರದಲ್ಲಿ ಯಶಸ್ಸು ಸಿಗಲಿದ್ದು ಹೆಚ್ಚಿನ ಧನ ಆಗಮನವಾಗುತ್ತದೆ‌. ಅದೇ ರೀತಿ ಮಿತ್ರರಿಂದ ಅತೀ ಹೆಚ್ಚಿನ ಖುಷಿ ಸಿಗುತ್ತದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಮುಂದುವರಿಯುತ್ತಿದೆ. ಅತೀ ಹೆಚ್ಚಿನ ನೆಮ್ಮದಿ ನಿಮಗೆ ಸಿಗುತ್ತದೆ.

ಮಿಥುನ ರಾಶಿ: ಇಂದು ಈ ರಾಶಿಗೆ ನಿಮ್ಮ ಭಾಗ್ಯದಲ್ಲಿ ಸ್ವಲ್ಪ ಏರುಪೇರು ಅನುಭವಿಸಬಹುದು. ಆದರೆ ಹಿರಿಯರ ಆಶೀರ್ವಾದ ಪಡೆಯುವುದರಿಂದ ಎಲ್ಲವೂ ಸರಿಹೋಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ಸಿಗುವುದಿಲ್ಲ. ಮನಸ್ಸಿಗೆ ಅತೀ ಹೆಚ್ಚಿನ ಬೇಸರ ನಿಮಗೆ ಉಂಟಾಗಬಹುದು.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದ್ದು ಶತ್ರುಗಳು ಹಿಮ್ಮೆಟ್ಟಬಹುದು. ಸಾಮಾಜಿಕ ಚಟುವಟಿಕೆಯಲ್ಲಿ ಹೆಚ್ಚು ಯಶಸ್ಸು ಸಿಗುತ್ತದೆ‌.

Vastu Tips: ಜೇಡ್‌ ಸಸ್ಯವನ್ನು ಈ ದಿಕ್ಕಿನಲ್ಲಿ ಇಟ್ಟರೆ ಸಂಪತ್ತು ವೃದ್ಧಿ! ಫೆಂಗ್‌ ಶೂಯಿ ಹೇಳುವ ವಾಸ್ತು ನಿಯಮ ಇದು

ತುಲಾ ರಾಶಿ: ತುಲಾ ರಾಶಿ ಅವರಿಗೆ ಬಿಸೆನೆಸ್ ವ್ಯವಹಾರದಲ್ಲಿ ಇಂದು ನಷ್ಟ ಉಂಟಾಗುವ ಸಾಧ್ಯತೆ ಇದೆ. ಅದೇ ರೀತಿ ಕೆಲಸ ಕಾರ್ಯದಲ್ಲೂ ತೊಡಕು ಉಂಟಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಗೆ ಇಂದು ತಾಯಿಯ ಆರೋಗ್ಯ ಬಗ್ಗೆ ಗಮನ ಅವಶ್ಯಕವಾಗಿ ಇರುತ್ತದೆ. ರಿಯಲ್ ಎಸ್ಟೇಟ್ ಬಿಸೆನೆಸ್ ನಲ್ಲಿ ಇರೋರಿಗೆ ಇಂದು ಆತಂಕ ಎದುರಾಗುವ ಸಾಧ್ಯತೆ ಹೆಚ್ಚು ಇರುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನ ವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಮಾಧ್ಯಮದಲ್ಲಿ ಇರೋರಿಗೆ ಇಂದು ಲಾಭದಾಯಕ ದಿನವಾಗಿದೆ.

ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಹೆಚ್ಚು ಯಶಸ್ಸು ಹಾಗೂ ಸಮೃದ್ಧಿ ಸಿಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ತೊಂದರೆಯಾಗಲಿದ್ದು ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ.

ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ಸಂಬಂಧದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.