ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ,ಪೂರ್ವ ಭಾದ್ರಪದ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ:ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಬಿಸೆನೆಸ್ ವ್ಯವಹಾರದಲ್ಲಿ ಯಶಸ್ಸು ಸಿಗಲಿದ್ದು ಹೆಚ್ಚಿನ ಧನ ಆಗಮನವಾಗುತ್ತದೆ. ಅದೇ ರೀತಿ ಮಿತ್ರರಿಂದ ಅತೀ ಹೆಚ್ಚಿನ ಖುಷಿ ಸಿಗುತ್ತದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಮುಂದುವರಿಯುತ್ತಿದೆ. ಅತೀ ಹೆಚ್ಚಿನ ನೆಮ್ಮದಿ ನಿಮಗೆ ಸಿಗುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಗೆ ನಿಮ್ಮ ಭಾಗ್ಯದಲ್ಲಿ ಸ್ವಲ್ಪ ಏರುಪೇರು ಅನುಭವಿಸಬಹುದು. ಆದರೆ ಹಿರಿಯರ ಆಶೀರ್ವಾದ ಪಡೆಯುವುದರಿಂದ ಎಲ್ಲವೂ ಸರಿಹೋಗುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ಸಿಗುವುದಿಲ್ಲ. ಮನಸ್ಸಿಗೆ ಅತೀ ಹೆಚ್ಚಿನ ಬೇಸರ ನಿಮಗೆ ಉಂಟಾಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದ್ದು ಶತ್ರುಗಳು ಹಿಮ್ಮೆಟ್ಟಬಹುದು. ಸಾಮಾಜಿಕ ಚಟುವಟಿಕೆಯಲ್ಲಿ ಹೆಚ್ಚು ಯಶಸ್ಸು ಸಿಗುತ್ತದೆ.
Vastu Tips: ಜೇಡ್ ಸಸ್ಯವನ್ನು ಈ ದಿಕ್ಕಿನಲ್ಲಿ ಇಟ್ಟರೆ ಸಂಪತ್ತು ವೃದ್ಧಿ! ಫೆಂಗ್ ಶೂಯಿ ಹೇಳುವ ವಾಸ್ತು ನಿಯಮ ಇದು
ತುಲಾ ರಾಶಿ: ತುಲಾ ರಾಶಿ ಅವರಿಗೆ ಬಿಸೆನೆಸ್ ವ್ಯವಹಾರದಲ್ಲಿ ಇಂದು ನಷ್ಟ ಉಂಟಾಗುವ ಸಾಧ್ಯತೆ ಇದೆ. ಅದೇ ರೀತಿ ಕೆಲಸ ಕಾರ್ಯದಲ್ಲೂ ತೊಡಕು ಉಂಟಾಗುತ್ತದೆ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ತಾಯಿಯ ಆರೋಗ್ಯ ಬಗ್ಗೆ ಗಮನ ಅವಶ್ಯಕವಾಗಿ ಇರುತ್ತದೆ. ರಿಯಲ್ ಎಸ್ಟೇಟ್ ಬಿಸೆನೆಸ್ ನಲ್ಲಿ ಇರೋರಿಗೆ ಇಂದು ಆತಂಕ ಎದುರಾಗುವ ಸಾಧ್ಯತೆ ಹೆಚ್ಚು ಇರುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನ ವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಮಾಧ್ಯಮದಲ್ಲಿ ಇರೋರಿಗೆ ಇಂದು ಲಾಭದಾಯಕ ದಿನವಾಗಿದೆ.
ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಹೆಚ್ಚು ಯಶಸ್ಸು ಹಾಗೂ ಸಮೃದ್ಧಿ ಸಿಗುತ್ತದೆ.
ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ತೊಂದರೆಯಾಗಲಿದ್ದು ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ.
ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ಸಂಬಂಧದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.