ದಿನ ಭವಿಷ್ಯ,ಅಕ್ಟೋಬರ್ 13, 2026: ಇಂದು ಈ ರಾಶಿಯವರ ಬಹುದಿನದ ಕನಸು ನನಸು!
Horoscope Today October 13th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ವರ್ಷಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ, ವಿಶಾಖ ನಕ್ಷತ್ರದ ಅಕ್ಟೋಬರ್ 13ನೇ ತಾರೀಖಿನ ಮಂಗಳವಾರದ ಈ ದಿನ ನವರಾತ್ರಿಯ ಮೂರನೇ ದಿನ, ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ವಿಶಾಖ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಇಂದು ಅತೀ ಉತ್ತಮವಾದ ದಿನವಾಗಿದೆ. ಪಾರ್ಟ್ನರ್ಸ್ ಶಿಪ್ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಆದರೆ ಇಂದು ವೈಯಕ್ತಿಕವಾಗಿ ಕೆಲವೊಂದು ವಿಚಾರದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅಗತ್ಯವಾಗಿರುತ್ತದೆ.
ವೃಷಭ ರಾಶಿ: ಈ ರಾಶಿಗೆ ಇಂದು ಅತೀ ಹೆಚ್ಚಿನ ಯಶಸ್ಸಿನ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಜಯವನ್ನು ಕಾಣುತ್ತೀರಿ.
ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಪ್ರೀತಿ,ಪ್ರೇಮ ವಿಚಾರದಲ್ಲಿ ಹೆಚ್ಚಿನ ಆತ್ಮವಿಶ್ವಾಸದಿಂದ ದಿನ ಕಳೆಯುತ್ತೀರಿ.
ಕಟಕರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಬಿಸೆನೆಸ್ ವ್ಯವಹಾರದಲ್ಲಿ ಹಾಗೂ ಕೋರ್ಟ್ ,ಕಛೇರಿ ವ್ಯವಹಾರದಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕಾಗುತ್ತದೆ. ನಿಮ್ಮ ತಪ್ಪುಗಳಿಗೆ ಇತರರು ಇಂದು ಟೀಕೆಯನ್ನು ಮಾಡಬಹುದು
ಸಿಂಹ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಮಾಧ್ಯಮದಲ್ಲಿ ಇರೋರಿಗೆ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ. ಇತರ ಕೆಲಸಗಳಲ್ಲಿ ಇರೋರಿಗೆ ಬಾಸಗಳಿಂದ ಕಿರಿ ಕಿರಿ ಉಂಟಾಗುವ ಸಾಧ್ಯತೆ ಇದೆ.
Vastu Tips: ವೈವಾಹಿಕ ಜೀವನದಲ್ಲಿ ನೆಮ್ಮದಿ ಬೇಕಾ? ಬೆಡ್‌ರೂಂನಲ್ಲಿ ಹೀಗಿರಲಿ ವಾಸ್ತು
ಕನ್ಯಾರಾಶಿ: ಈ ದಿನ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ಇಂದು ನೆಮ್ಮದಿ ಸಿಗುವುದಿಲ್ಲ. ಯಾವುದೇ ಮುಖ್ಯ ನಿರ್ಧಾರವನ್ನು ಕೂಡ ಇಂದು ಕೈಗೊಳ್ಳಲು ಹೋಗಬೇಡಿ.
ತುಲಾ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಹಿಂದಿನ ದಿನದಲ್ಲಿ ಇದ್ದ ತೊಂದರೆ ಮಯವಾಗುತ್ತದೆ. ಕೆಲಸ ಕಾರ್ಯದಲ್ಲಿ ಎಲ್ಲರ ಸಹಕಾರ ದೊರಕುತ್ತದೆ
ವೃಶ್ಚಿಕ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗುವುದಿಲ್ಲ. ಮನಸ್ಸಿಗೆ ನಾನಾ ರೀತಿಯ ಯೋಚನೆ ಕಾಡಬಹುದು.
ಧನು ರಾಶಿ: ಇಂದು ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ನಿಮ್ಮ ಶ್ರಮಕ್ಕೆ ತಕ್ಕ ಲಾಭ ಸಿಗಬಹುದು.
ಮಕರ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಅಂದುಕೊಂಡ ಕೆಲಸ ಕಾರ್ಯದಲ್ಲಿ ಜಯ ಕಾಣುತ್ತೀರಿ. ನಿಮ್ಮ ಕನಸುಗಳು ಇಂದು ನೆರೆವೇರುತ್ತವೆ.
ಕುಂಭ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಹಿಂದಿನ ಸಮಸ್ಯೆಗಳೆಲ್ಲ ಪರಿಹಾರವಾಗುತ್ತದೆ. ಹಿರಿಯರ ಆಶೀರ್ವಾದ ಕೂಡ ನಿಮಗೆ ಸಿಗಬಹುದು.
ಮೀನ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಯಾರ ಸಹಕಾರ ಕೂಡ ಸಿಗದೇ ಇರಬಹುದು. ಯಾವುದೇ ಮುಖ್ಯ ನಿರ್ಧಾರ ಇಂದು ಕೈಗೊಳ್ಳುವುದು ಒಳಿತಲ್ಲ.