ಬೆಂಗಳೂರು: ಇಂದು ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಕೃತಿಕಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ರೋಹಿಣಿ ನಕ್ಷತ್ರ ಇದ್ದು ಅಧಿಪತಿ ಚಂದ್ರ ಆಗಿದ್ದಾನೆ.. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂದು ಮೇಷ ರಾಶಿಯವರಿಗೆ ಕುಟುಂಬದ ಬಗ್ಗೆ ಖುಷಿಯಾದ ವಾತಾವರಣ ಇರಬಹುದು. ಮನೆಯಲ್ಲಿ ಸಂತೋಷದ ಕ್ಷಣಗಳು ಒಲಿದು ಬರಬಹುದು.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಮನಸ್ಸಿಗೆ ಅತೀ ಹೆಚ್ಚಿನ ನೆಮ್ಮದಿ ಸಿಗುತ್ತದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಎಲ್ಲ ತೊಂದರೆಗಳು ಬಗೆಹರಿಯುತ್ತದೆ. ಉತ್ತಮ ಮಾರ್ಗದರ್ಶನ ನಿಮಗೆ ಸಿಗಬಹುದು.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಷ್ಟಕರವಾದ ದಿನವಾಗಿದೆ. ನಿಮ್ಮ ಪ್ರೀತಿ ಪಾತ್ರರಿಂದ ಬೇಸರ ಇರಬಹುದು. ಯಾರ ಸಹಕಾರ ಕೂಡ ನಿಮಗೆ ಸಿಗದೇ ಇರಬಹುದು. ಹಣ ವೆಚ್ಚ ಕೂಡ ಆಗಬಹುದು.
ಕಟಕ ರಾಶಿ: ಕಟಕ ರಾಶಿ ಅವರಿಗೆ ಅತೀ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ಧಿ, ಮಿತ್ರರಿಂದ ಧನ ಆಗಮನ ವಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ಆದರೂ ಕೂಡ ಜವಾಬ್ದಾರಿಗಳು ಜಾಸ್ತಿಯಾಗಿರುತ್ತವೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮುಖ್ಯವಾದ ವಿಚಾರದಲ್ಲಿ ಗೆಲವು ನಿಮ್ಮದಾಗಬಹುದು
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ಸಿಗುವುದಿಲ್ಲ. ಧ್ಯಾನದಿಗಳನ್ನು ಮಾಡಿ ಸಮಯ ಕಳೆಯಬೇಕಾಗುತ್ತದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ನಿಮ್ಮ ಪ್ರೀತಿ ಪಾತ್ರರಿಂದ ಎಲ್ಲ ರೀತಿಯ ಸಹಕಾರ ಸಿಗಬಹುದು.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ.ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಸಿಗಲಿದೆ. ಶತ್ರುಗಳನ್ನು ನೀವು ಹಿಮ್ಮೆಟ್ಟಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ನಿಮ್ಮ ಬುದ್ದಿವಂತಿಕೆ ಉಪಯೋಗಿಸಿಕೊಂಡು ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಕ್ರಿಯಾಶೀಲತೆಯಿಂದ ಇಂದು ಅಭಿವೃದ್ಧಿಯಾಗಬಹುದು.
ಕುಂಭರಾಶಿ: ಈ ರಾಶಿಯವರಿಗೆ ಸಾಮಾಜಿಕ ಚಟುವಟಿಕೆ ಮನೆಯ ಜವಾಬ್ದಾರಿ ಸಮತೋಲಿಸಲು ಕಷ್ಟವಾಗಬಹುದು. ಮನೆಯ ತಾಪತ್ರಯಗಳು ಹೆಚ್ಚಾಗಬಹುದು.
ಮೀನ ರಾಶಿ: ಮೀನ ರಾಶಿಗೆ ಅತೀ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಮಾಧ್ಯಮದಲ್ಲಿ ಇರೋರಿಗೆ ಉತ್ತಮವಾಗಿದೆ