ದಿನ ಭವಿಷ್ಯ, ಆಗಸ್ಟ್ 8, 2026: ಈ ರಾಶಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಪ್ರಮುಖ ಬದಲಾವಣೆ ಸಾಧ್ಯ!
Horoscope Today August 8th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ದಶಮಿ ತಿಥಿ, ರೋಹಿಣಿ ನಕ್ಷತ್ರದ, ಆಗಸ್ಟ್ 8ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ರೋಹಿಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಗೆ ಇಂದು ಕುಟುಂಬದಲ್ಲಿ ಅತೀಯಾದ ಭಾವುಕತೆ ಕಾಡಬಹುದು. ಹಾಗಾಗಿ ಕೆಲವೊಂದು ವಿಚಾರದಲ್ಲಿ ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ.
ವೃಷಭ ರಾಶಿ: ಈ ರಾಶಿಯವರಿಗೆ ನಿಮ್ಮ ರಾಶಿಯಲ್ಲೇ ಚಂದ್ರ ಉಚ್ಚ ಸ್ಥಾನದಲ್ಲಿದ್ದಾನೆ. ಹೀಗಾಗಿ ನಿಮ್ಮಲ್ಲೇ ನೀವು ಅತೀ ಭಾವುಕರಾಗಿ ಕಾಡುತ್ತೀರಿ. ನಿಮಗೆ ಬೇಕಾದವರು ದೂರವಾಗುತ್ತಾರೆ ಅನ್ನುವ ಭಾವನೆ ನಿಮ್ಮಲ್ಲಿ ಕಾಡಬಹುದು.
ಮಿಥುನ ರಾಶಿ: ಇಂದು ಈ ರಾಶಿಗೆ ಮನಸ್ಸಿಗೆ ಬಹಳಷ್ಟು ಕ್ಲೇಶವಾಗುವ ದಿನವಾಗುತ್ತದೆ. ನಿಮ್ಮ ಮಿತ್ರತ್ವದಲ್ಲಿ ಒಡಕು ಕಾಣುವ ಸಾಧ್ಯತೆ ಕೂಡ ಇರುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಗುಂಪು ಕೆಲಸದಿಂದ ಅತೀ ಹೆಚ್ಚಿನ ನೆಮ್ಮದಿ ಸಿಗುತ್ತದೆ. ಆದರೆ ದಾಂಪತ್ಯ ಹಾಗೂ ಪ್ರೇಮ,ಪ್ರೀತಿ ವಿಚಾರದಲ್ಲಿ ಬೇಸರ ಉಂಟಾಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಪ್ರಮುಖವಾದ ಬದಲಾವಣೆ. ಇದರಿಂದ ಬಹಳಷ್ಟು ಭಾವುಕತೆಯನ್ನು ನೀವು ಎದುರಿಸಬೇಕಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಹಿರಿಯರು ಹಾಗೂ ಅಧಿಕಾರಿಗಳಿಂದ ಕೆಲವು ಮಾತುಗಳನ್ನು ಕೇಳಬೇಕಾಗಿ ಬರಬಹುದು. ಇದರಿಂದ ಬಹಳಷ್ಟು ಬೇಸರ ಉಂಟಾಗಬಹುದು.
ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ತೊಂದರೆ ಎದುರಾಗಬಹುದು. ವೈಯಕ್ತಿಕ ವಿಚಾರದಲ್ಲೂ ಹಲವು ಅಡಚಣೆಗಳು ಎದುರಾಗಬಹುದು.
ವೃಶ್ಚಿಕ ರಾಶಿ: ಈ ರಾಶಿಗೆ ಅತ್ಯುತ್ತಮವಾದ ದಿನವಾಗಿದೆ. ಪ್ರೀತಿ ಪಾತ್ರರಿಂದ ಬಹಳಷ್ಟು ನೆಮ್ಮದಿ ಸಿಗುತ್ತದೆ. ಬಿಸೆನೆಸ್ ವ್ಯವಹಾರದಲ್ಲೂ ಯಶಸ್ಸು ಕಾಣುತ್ತೀರಿ
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಸಾಮಾಜಿಕ ಚಟುವಟಿಕೆ ಯಲ್ಲಿ ಯಶಸ್ಸು ಸಿಗುತ್ತದೆ. ಶತ್ರುಗಳಿಂದ ನೆಮ್ಮದಿ ಸಿಗಲಿದ್ದು ಅಂದುಕೊಂಡ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮಕ್ಕಳ ವಿಚಾರದಲ್ಲಿ ಬಹಳಷ್ಟು ಬೇಸರ ಉಂಟಾಗಬಹುದು.
ಕುಂಭ ರಾಶಿ: ಈ ರಾಶಿಗೆ ಮನೆಯ ಹಾಗೂ ಸಂಸಾರದ ವಿಚಾರ ದಲ್ಲಿ ಬೇಸರ ಉಂಟಾಗಬಹುದು. ತಾಯಿಯ ಆರೋಗ್ಯದ ಬಗ್ಗೆಯೂ ನೀವು ಗಮನ ಹರಿಸಬೇಕಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಅತ್ಯುತ್ತಮವಾದ ದಿನವಾಗಿದೆ. ನಿಮ್ಮ ಮಾತಿನ ಚಾಕಚಕ್ಯತೆಯಿಂದ ಎಲ್ಲವನ್ನು ಸಾಧಿಸುತ್ತೀರಿ.