ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಮೇ 21, 2026: ಇಂದು ಹೊಸ ಉದ್ಯಮ ಆರಂಭಿಸಲು ಉತ್ತಮ ಸಮಯ

Horoscope Today May 21st 2026: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷ ಪಕ್ಷ, ಪಂಚಮಿ ತಿಥಿ, ಪುನರ್ವಸು ನಕ್ಷತ್ರದ ಮೇ 21ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು, ಮೇ 21: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಪಂಚಮಿ ತಿಥಿ, ಪುನರ್ವಸು ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಪುನರ್ವಸು ನಕ್ಷತ್ರದ ಅಧಿಪತಿ ಗುರು. ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ‌. ಈ ರಾಶಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ತಾಯಿಗೆ ನಿಮ್ಮ ಬಗ್ಗೆ ಬೇಸರ ಇದ್ದರೂ ಈ ಸಮಸ್ಯೆ ಬಗೆಹರಿದು ನೆಮ್ಮದಿ ಪ್ರಾಪ್ತಿಯಾಗುತ್ತದೆ.

ವೃಷಭ ರಾಶಿ: ಈ ರಾಶಿಯವರು ಇಂದು ಮಾತಿನ ಮೂಲಕ ಹೆಚ್ಚಿನ ಯಶಸ್ಸು ಕಾಣುತ್ತೀರಿ. ಸೋಷಿಯಲ್ ಮೀಡಿಯಾ, ಟಿವಿ ಹಾಗೂ ರೇಡಿಯೋದಲ್ಲಿ ಕೆಲಸ ಮಾಡೋರಿಗೆ ಉತ್ತಮ ದಿನವಾಗಲಿದೆ.

ಮಿಥುನ ರಾಶಿ: ಈ ರಾಶಿಯವರಿಗೆ ಇಂದು ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ. ನೀವು ಇತರರಿಗೆ ಸಲಹೆ ನೀಡುವ ಮೂಲಕ ಗೆಲುವು ಸಾಧಿಸುತ್ತೀರಿ.

ಕಟಕ ರಾಶಿ: ಕಟಕ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದ್ದು, ಬೇರೆಯವರಿಗೆ ಉಪದೇಶ ಮಾಡುವಷ್ಟು ವಿವೇಕತೆ ನಿಮ್ಮಲ್ಲಿ ಇರುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮುಖ್ಯವಾದ ಸಂಬಂಧದಲ್ಲಿ ಒಡಕು ಕಾಣುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಯಾವುದೇ ಮುಖ್ಯ ನಿರ್ಧಾರವನ್ನು ಇಂದು ಕೈಗೊಳ್ಳಲು ಹೋಗಬೇಡಿ.

ವೈವಾಹಿಕ ಜೀವನದಲ್ಲಿ ನೆಮ್ಮದಿ ಬೇಕಾ? ಬೆಡ್‌ರೂಂನಲ್ಲಿ ಹೀಗಿರಲಿ ವಾಸ್ತು

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಒಮ್ಮೆಲೆ ಯಶಸ್ಸು ಸಿಗುತ್ತದೆ. ಇಂದು ಉತ್ತಮವಾದ ದಿನವಾಗಿದ್ದು, ಧನಾಗಮನ ಸಾಧ್ಯತೆ ಇದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಸಮಸ್ಯೆ ಕಾಡಬಹುದು. ಹಿರಿಯರಿಗೆ ಗೌರವ ನೀಡಬೇಕಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಅದೃಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು, ಹಿಂದಿನ ಮೂರು ನಾಲ್ಕು ದಿನದಲ್ಲಿ ಇದ್ದ ತೊಂದರೆ ಬಗೆಹರಿಯುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಆದರೆ ಆಧ್ಯಾತ್ಮಿಕವಾಗಿ ನೀವು ಪ್ರಗತಿಯನ್ನು ಕಾಣಬಹುದು. ಧಾರ್ಮಿಕ ಕೆಲಸಗಳಿಗೆ ಇಂದು ಹೆಚ್ಚಿನ ಒತ್ತು ನೀಡಿ.

ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಸಂಸಾರದಲ್ಲಿ ನೆಮ್ಮದಿ ಪ್ರಾಪ್ತಿಯಾಗುತ್ತದೆ.

ಕುಂಭರಾಶಿ: ಈ ರಾಶಿಯವರ ಶತ್ರುಗಳು ಹಿಮ್ಮೆಟ್ಟಬಹುದು. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುವ ಸಾಧ್ಯತೆ ಇದೆ.

ಮೀನ ರಾಶಿ: ಮೀನ ರಾಶಿಯವರಿಗೆ ಮಕ್ಕಳಿಂದ ಮನಸ್ಸಿಗೆ ನೆಮ್ಮದಿ ಹಾಗೂ ಹಣಕಾಸಿನ ವಿಚಾರವಾಗಿ ಇಂದು ಯಶಸ್ಸು ಕಾಣುತ್ತೀರಿ.