ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜೂನ್ 5, 2026: ಎಚ್ಚರ! ಇಂದು ಭಾರಿ ಅಪಾಯ ಎದುರಾಗಲಿದೆ

Horoscope Today June 5th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಪಂಚಮಿ ತಿಥಿ, ಶ್ರವಣ ನಕ್ಷತ್ರದ, ಜೂನ್ 5ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂಟರ್‌ನೆಟ್ ಚಿತ್ರ

ಬೆಂಗಳೂರು, ಜೂ. 5: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಪಂಚಮಿ ತಿಥಿ, ಶ್ರವಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಶ್ರವಣ ನಕ್ಷತ್ರದ ಅಧಿಪತಿ ಚಂದ್ರ. ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಆದರೆ ಇಂದು ನಿಮ್ಮಲ್ಲಿ ಭಾವುಕತೆ ಹೆಚ್ಚಾಗುವ ಸಾಧ್ಯತೆ ಇದೆ.

ವೃಷಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪ್ರೀತಿ ಪಾತ್ರರು ಹಾಗೂ ಮನೆಯವರ ಜತೆ ನೆಮ್ಮದಿ ಕಾಣುತ್ತೀರಿ. ದೊಡ್ಡವರ ಹಾಗೂ ಹಿರಿಯರ ಆಶೀರ್ವಾದದಿಂದ ಜಯ ಕಾಣುತ್ತೀರಿ‌.

ಮಿಥುನ ರಾಶಿ: ಈ ರಾಶಿಯವರಿಗೆ ಇಂದು ಸ್ವಲ್ಪ ಕಷ್ಟದ ದಿನವಾಗಲಿದೆ. ಪ್ರೀತಿ ಪಾತ್ರರ ಜತೆ ಕಲಹಗಳು ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಎಲ್ಲರ ಜತೆ ವಿನಿಯತೆಯಿಂದ ವರ್ತಿಸಿ.

ಕಟಕ ರಾಶಿ: ಕಟಕ ರಾಶಿಯವರಿಗೆ ಈ ದಿನ ಉತ್ತಮವಾಗಿದೆ. ಎಲ್ಲ ರೀತಿಯಿಂದಲೂ ನೀವು ಸಹಕಾರ ಪಡೆಯಬಹುದು‌. ದಾಂಪತ್ಯದಲ್ಲಿ ನೆಮ್ಮದಿ ಹಾಗೂ ಸ್ನೇಹಿತರಿಂದ ಖುಷಿ, ಸಂತೋಷ ಸಿಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಸಾಮಾಜಿಕ ಚಟುವಟಿಕೆಯಲ್ಲಿ ಜಯ ಸಿಗುತ್ತದೆ ಹಾಗೂ ಶತ್ರುಗಳು ಹಿಮ್ಮೆಟ್ಟಬಹುದು. ಎಲ್ಲ ರೀತಿಯಿಂದಲೂ ನೆಮ್ಮದಿ ಸಿಗುತ್ತದೆ.

ಸರಿಯಾದ ದಿಕ್ಕಿನಲ್ಲಿ ಸ್ನೇಕ್ ಪ್ಲಾಂಟ್ ಇಟ್ಟರೆ ಅದೃಷ್ಟ, ಸಮೃದ್ಧಿ ಖಚಿತ!

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ವ್ಯವಹಾರದಲ್ಲಿ ನಷ್ಟ. ಹಾಗಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ.

ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಆಸ್ತಿ ಪಾಸ್ತಿ ವಿಚಾರದಲ್ಲಿ ನಿಮಗೆ ತೊಂದರೆಯಾಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ತೊಂದರೆ ಉಂಟಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುತ್ತದೆ. ಮಾಧ್ಯಮ, ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಯಶಸ್ಸು ಖಂಡಿತ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಆರೋಗ್ಯ ಕಡೆ ಗಮನ ನೀಡಬೇಕು. ಕುಟುಂಬದ ಜವಾಬ್ದಾರಿ ಜಾಸ್ತಿಯಾಗಲಿದ್ದು, ಮನೆಯವರ ಜತೆ ಹೆಚ್ಚಿನ ಸಮಯವನ್ನು ನೀವು ಕಳೆಯಬೇಕಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು  ಹಿಂದಿನ ಎರಡು ಮೂರು ದಿನದ ತೊಂದರೆ ಮಾಯವಾಗುತ್ತದೆ.

ಕುಂಭ ರಾಶಿ: ಈ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಯಾರ ಸಹಕಾರ ಕೂಡ ಇಂದು ಸಿಗುವುದಿಲ್ಲ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಎಲ್ಲ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಇಷ್ಟಾರ್ಥ ಸಿದ್ಧಿಯಾಗಲಿದೆ.