ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜೂನ್ 8, 2026: ಇಂದು ಭಾರಿ ಅದೃಷ್ಟ; ನೀವು ಮುಟ್ಟಿದ್ದೆಲ್ಲ ಚಿನ್ನವಾಗುವ ದಿನ

Horoscope Today June 8th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಅಷ್ಟಮಿ ತಿಥಿ, ಪೂರ್ವಭಾದ್ರಪದ ನಕ್ಷತ್ರದ ಜೂನ್ 8ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂಟರ್‌ನೆಟ್ ಚಿತ್ರ

ಬೆಂಗಳೂರು, ಜೂ. 8: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ತಿಥಿ, ಪೂರ್ವ ಭಾದ್ರಪದ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಮೇಷ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನೆಯಲ್ಲಿ ನೆಮ್ಮದಿ ಇದ್ದು ಸುಖ ಹಾಗೂ ಸಮೃದ್ಧಿ ಹೆಚ್ಚಲಿದೆ. ಆಸ್ತಿ ಪಾಸ್ತಿ ವಿಚಾರದಲ್ಲಿ ನಿಮಗೆ ಲಾಭದಾಯಕ ದಿನವಾಗಲಿದೆ.

ವೃಷಭ ರಾಶಿ: ಈ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಸೋಷಿಯಲ್ ಮೀಡಿಯಾ ಹಾಗೂ ಮಾಧ್ಯಮದಲ್ಲಿ ಇರೋರಿಗೆ ಉತ್ತಮ ದಿನವಾಗಲಿದೆ.

ಮಿಥುನ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನೆಯಲ್ಲಿ ನೆಮ್ಮದಿ ಇದ್ದು ಸಂಸಾರದಲ್ಲಿ ಸುಖ ಹಾಗೂ ನೆಮ್ಮದಿಯನ್ನು ಕಾಣಬಹುದು. ಧನಾಗಮನದ ಸೂಚನೆಗಳು ಕೂಡ ಇದೆ.

ಕಟಕ ರಾಶಿ: ಕಟಕ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಹಿಂದಿನ ದಿನದಲ್ಲಿ ನಿಮಗೆ ಬಹಳ ನೋವು ಉಂಟಾಗಿತ್ತು. ಇದೀಗ ಮನಸ್ಸಿಗೆ ನೆಮ್ಮದಿ ಸಿಕ್ಕಿ ಶತ್ರುಗಳು ಹಿಮ್ಮೆಟ್ಟಬಹುದು.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಸ್ನೇಹಿತರ ಜತೆ ನಿಮಗೆ ಒಡಕು ಉಂಟಾಗುವ ಸಾಧ್ಯತೆ ಇದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು, ಧನಾಗಮನದ ಸೂಚನೆ ಇದೆ. ಮಿತ್ರರೊಡನೆ ಬಹಳ ಖುಷಿಯಾದ ಕ್ಷಣವನ್ನು ನೀವು ಕಳೆಯಬಹುದು.

ಮನೆಯಲ್ಲಿ ಧನ, ಸಮೃದ್ಧಿ ಹಾಗೂ ಸಕಾರಾತ್ಮಕ ಶಕ್ತಿ ಹೆಚ್ಚಾಗಬೇಕಾ?

ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ವ್ಯವಹಾರದಲ್ಲಿ ನಿಮಗೆ ನಷ್ಟ ಉಂಟಾಗಲಿದೆ ಹಾಗೂ ಕಾರ್ಯ ಕ್ಷೇತ್ರದಲ್ಲೂ ಯಶಸ್ಸು ಸಿಗುವುದಿಲ್ಲ. ಸ್ತ್ರೀಯರಿಂದ ಬಹಳಷ್ಟು ತೊಂದರೆಯನ್ನು ನೀವು ಎದುರಿಸಬೇಕಾಗಿ ಬರಬಹುದು.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುತ್ತದೆ. ಹಿರಿಯರಿಂದ ಅತಿ ಹೆಚ್ಚಿನ ಆಶೀರ್ವಾದ ಇಂದು ಪ್ರಾಪ್ತಿಯಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಹಿಂದೆ ಇದ್ದ ನೋವೆಲ್ಲ ಪರಿಹಾರವಾಗುವ ದಿನ ನಿಮ್ಮದಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಸ್ತ್ರೀಯರಿಂದ ತೊಂದರೆ ಉಂಟಾಗಬಹುದು. ನಿಮ್ಮ ಗೌರವಕ್ಕೆ ದಕ್ಕೆ ತರುವ ನಿಮ್ಮದಾಗುತ್ತದೆ.

ಕುಂಭ ರಾಶಿ: ಈ ರಾಶಿಗೆ ಕಷ್ಟದ ದಿನವಾಗಲಿದೆ. ಸ್ತ್ರೀಯರ ಜತೆ ವೈ ಮನಸ್ಸು ಉಂಟಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲೂ ತೊಂದರೆ ಎದುರಾಗಬಹುದು.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಣಕಾಸಿನ ವಿಚಾರವಾಗಿ ಯಶಸ್ಸು ಸಿಗುತ್ತದೆ. ಎಲ್ಲ ರೀತಿಯ ವಹಿವಾಟಿನಲ್ಲಿ ನೆಮ್ಮದಿ ಸಿಗುತ್ತದೆ.