ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಜೂನ್ 14, 2026: ಈ ರಾಶಿಯವರಿಗೆ ಇಂದು ಅದೃಷ್ಟದ ಜೀವನ ಆರಂಭ!

Horoscope Today June 14th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಚತುರ್ದಶಿ ತಿಥಿ, ರೋಹಿಣಿ ನಕ್ಷತ್ರದ, ಜೂನ್ 14ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಈ ರಾಶಿಯವರಿಗೆ ಇಂದು ಸ್ವಂತ ಉದ್ಯಮದಲ್ಲಿ ಯಶಸ್ಸು

ಇಂಟರ್ ನೆಟ್ ಚಿತ್ರ -

Profile
Pushpa Kumari Jun 14, 2026 6:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ರೋಹಿಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಇಂದು ಸಂಸಾರದ ವಿಚಾರದಲ್ಲಿ ಬಹಳಷ್ಟು ನೆಮ್ಮದಿ ಕಾಣುವ ದಿನವಾಗಿದೆ. ಹಾಗೂ ಹಣಕಾಸಿನ ವ್ಯವಹಾರದಲ್ಲಿ ಲಾಭ ಇದ್ದು ಧನ ಆಗಮನದ ಸೂಚನೆಗಳು ಕೂಡ ಇವೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ಆತಂಕವೆಲ್ಲವೂ ದೂರವಾಗುತ್ತದೆ‌. ಮನಸ್ಸಿಗೆ ಅತೀ ಹೆಚ್ಚಿನ ಖುಷಿ ನಿಮಗೆ ಸಿಗುತ್ತದೆ.

ಮಿಥುನ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಿತ್ರತ್ವದಲ್ಲಿ ಒಡಕು ಕಂಡು ಬರಲಿದ್ದು ನಿಮ್ಮ ಬಿಸೆನೆಸ್ ವ್ಯವಹಾರದ ಪಾಲುದಾರಿಕೆಯಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಅತ್ಯುತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಅದೇ ರೀತಿ ಮಿತ್ರರಿಂದ ಧನ ಆಗಮನದ ಸೂಚನೆಗಳು ಕೂಡ ಇವೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ‌. ಆದರೆ ಮನೆಯಲ್ಲಿ ಕೂಡ ನಿಮ್ಮ ಸಮಯವನ್ನು ನೀವು ಮೀಸಲಿಡಬೇಕಾಗುತ್ತದೆ.

Vastu Tips; ಕರ್ಪೂರದಿಂದ ಮನೆಯ ವಾಸ್ತು ದೋಷ ನಿವಾರಣೆ: ಆರ್ಥಿಕ ಸಮಸ್ಯೆ, ಕಲಹಗಳಿಗೆ ಇಲ್ಲಿದೆ ಪರಿಹಾರ

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಭಾಗ್ಯೋದಯವಾದ ದಿನ ವಾಗಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ..ಹಿಂದಿನ ಎರಡು ಮೂರು ದಿನಗಳ ವೈಯಕ್ತಿಕ ಸಮಸ್ಯೆ ಎಲ್ಲವೂ ಇಂದು ಮಾಯವಾಗುತ್ತದೆ.

ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಮನಸ್ಸಿಗೆ ಬಹಳಷ್ಟು ಬೇಸರ ಉಂಟಾಗುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಪ್ರೀತಿ ಪಾತ್ರರಿಂದ ಎಲ್ಲ ರೀತಿಯ ಸಹಕಾರ ನಿಮಗೆ ಸಿಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ. ಆದರೆ ಮಿತ್ರರು ಶತ್ರುಗಳು ಆಗುವ ದಿನ ನಿಮ್ಮದಾಗಬಹುದು‌

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ ‌ ಕಾರ್ಯಕ್ಷೇತ್ರದಲ್ಲಿ ಇಂದು ಯಶಸ್ಸು ಸಿಗುತ್ತದೆ. ನಿಮ್ಮ ಬುದ್ದಿ ವಂತಿಕೆ ಉಪಯೋಗಿಸುವ ಕೆಲಸದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ತಾಯಿಯ ಆರೋಗ್ಯ ಹಾಗೂ ಆಸ್ತಿ ಪಾಸ್ತಿ ವಿಚಾರವಾಗಿ ಸ್ವಲ್ಪ ಜಾಸ್ತಿ ತಲೆಬಿಸಿಯಾಗಬಹುದು‌

ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಮಾಧ್ಯಮ ಹಾಗೂ ಸೇಲ್ಸ್ ಮಾರ್ಕೆಟಿಂಗ್ ವ್ಯವಹಾರದಲ್ಲಿ ನಿಮಗೆ ಹೆಚ್ಚಿನ ಯಶಸ್ಸು ಸಿಗುತ್ತದೆ. ಅದೇ ರೀತಿ ಬೇರೆಯವರ ಸಹಕಾರ ನಿಮಗೆ ಸಿಗುತ್ತದೆ.