ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು ಚೈತ್ರ ಮಾಸೆ, ಪುನರ್ವಸು ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಪುನರ್ವಸು ನಕ್ಷತ್ರದ ಅಧಿಪತಿ ಗುರು ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ನಿಮ್ಮ ಕುಟುಂಬ ಜವಾಬ್ದಾರಿ ನಿಮಗೆ ಇಂದು ಬಹಳ ಮುಖ್ಯವಾಗುತ್ತದೆ.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಮಾತಿನಲ್ಲಿ ಇಂದು ಲಾಭದಾಯಕ ದಿನವಾಗಿದೆ. ಎಲ್ಲ ಕೆಲಸ ಕಾರ್ಯಗಳು ಇಂದು ನಿಮ್ಮ ಪರವಾಗಿಯೇ ನಡೆಯುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರು ನಿಮ್ಮ ಸಂಸಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ.ಆದರೂ ಕೂಡ ಕುಟಂಬದವರು ಜೊತೆ ಸೇರಿ ಸಂತೋಷದಾಯಕ ದಿನವಾಗಿ ಕಳೆಯುತ್ತೀರಿ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಹಿಂದೆ ಇದ್ದ ತೊಂದರೆಗಳು ಬಗೆಹರಿಯಬಹುದು. ಭಗವಂತನ ಉತ್ತಮ ಮಾರ್ಗದರ್ಶನ ನಿಮಗೆ ಸಿಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಬೇಡ. ಮಿತ್ರರು ನಿಮ್ಮನ್ನು ದೂರಮಾಡಬಹುದು.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಭಾಗ್ಯೋದಯವಾಗುತ್ತದೆ. ಮಿತ್ರರಿಂದ ಅತೀ ಹೆಚ್ಚಿನ ಖುಷಿ ಸಿಗುತ್ತದೆ.
Vastu Tips: ಮನೆಯಲ್ಲಿ ಬಿದಿರು ಗಿಡ ಇಟ್ಟರೆ ಅದೃಷ್ಟ ಹೆಚ್ಚಳ! ಈ ವಾಸ್ತು ನಿಯಮ ಪಾಲಿಸಿದರೆ ಮಾತ್ರ
ತುಲಾ ರಾಶಿ: ತುಲಾ ರಾಶಿಯವರಿಗೆ ಕಾರ್ಯಕ್ಷೇತ್ರದ ಜವಾಬ್ದಾರಿ ತುಂಬಾನೇ ಜಾಸ್ತಿಯಾಗಿರುತ್ತದೆ. ಆದರೂ ಕೂಡ ಆಧ್ಯಾತ್ಮಿಕ ವಾಗಿ ಚಿಂತನೆ ಮಾಡುವುದರಿಂದ ಜಯಗಳಿಸಬಹುದು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಭಾಗ್ಯೋದಯವಾದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆದರೆ ಕೆಲಸ ಕಾರ್ಯದಲ್ಲಿ ಹೆಚ್ಚಿನ ಜವಾಬ್ದಾರಿ ನಿಮಗೆ ಬೇಕಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ವಿಚಾರದಲ್ಲಿ ಮನಸ್ಸಿಗೆ ಬೇಸರ ಆಗಬಹುದು. ನಿಮ್ಮ ಪ್ರೀತಿ ಪಾತ್ರರಿಂದ ಸಾಮರಸ್ಯ ಇರದೇ ಇರಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಪ್ರೀತಿ ಪಾತ್ರರಿಂದ ಅಕ್ಕರೆ ಪ್ರಾಪ್ತಿಯಾಗುತ್ತದೆ. ವ್ಯಾಪಾರ ವ್ಯಾವಹಾರಿಕವಾಗಿಯೂ ಲಾಭ
ಕುಂಭರಾಶಿ: ಈ ರಾಶಿಯವರಿಗೆ ಅತ್ಯುತ್ತಮ ವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಮುನ್ನಡೆಯನ್ನು ಸಾಧಿಸುತ್ತೀರಿ. ಆತ್ಮವಿಶ್ವಾಸ ಕೂಡ ಚೆನ್ನಾಗಿ ಇರುತ್ತದೆ.
ಮೀನ ರಾಶಿ: ಮೀನ ರಾಶಿಗೆ ಕ್ರೀಯಾಶೀಲತೆಯಿಂದ ಗೆಲ್ಲಬಹುದು. ಆದರೆ ಯಾರ ಸಹಕಾರ ಕೂಡ ನಿಮಗೆ ಸಿಗದೇ ಇರಬಹುದು.