ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜೂನ್ 19, 2026: ಈ ರಾಶಿಯವರ ಸಂಕಷ್ಟಗಳೆಲ್ಲ ಇಂದು ದೂರವಾಗುವ ದಿನ!

Horoscope Today June 19th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಪಂಚಮಿ ತಿಥಿ, ಆಶ್ಲೇಷಾ ನಕ್ಷತ್ರದ, ಜೂನ್ 19ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಆಶ್ಲೇಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಗಜಕೇಸರಿ ಯೋಗ ಮುಂದುವರಿಯುದರಿಂದ ಪ್ರತಿಷ್ಠಿತ ಸ್ಥಾನಮಾನ ನಿಮಗೆ ಇಂದು ಸಿಗಬಹುದು. ಕಾರ್ಯಕ್ಷೇತ್ರದಲ್ಲಿ ಹಾಗೂ ಬಿಸೆನೆಸ್ ವ್ಯವಹಾರದಲ್ಲಿ ಕೆಲಸ ಮಾಡೋರಿಗೆ ಅತೀ ಲಾಭದಾಯಕವಾದ ದಿನವಾಗಿದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಸೋಷಿಯಲ್ ಮೀಡಿಯಾ ಹಾಗೂ ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಯಶಸ್ಸು ಪ್ರಾಪ್ತಿಯಾಗುತ್ತದೆ. ಅಣ್ಣ ತಮ್ಮಂದಿರ ಜೊತೆ ಇಂದು ಬಹಳ ಒಳ್ಳೆಯ ದಿನವನ್ನು ನೀವು ನೋಡಬಹುದು.

ಮಿಥುನ ರಾಶಿ: ಇಂದು ಈ ರಾಶಿಗೆ ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು . ಖುಷಿಯಾದ ವಾತಾವರಣ ಇಂದು ಮುಂದುವರಿಯುತ್ತಿವೆ‌. ಇಂದು ನಿಮಗೆ ಧನ ಆಗಮನ ಹಾಗೂ ನೆಮ್ಮದಿ ಪ್ರಾಪ್ತಿಯಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನ ವಾಗಿದೆ. ವ್ಯಕ್ತಿತ್ವದ ತೊಂದರೆಗಳು ಇಂದು ಕಾಡಬಹುದು.ಅನೇಕ ರೀತಿಯಲ್ಲಿ ಟೀಕೆಗಳನ್ನು ನೀವು ಇಂದು ಕೇಳಬಹುದು.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ನಿಮ್ಮ ಸಂಬಂಧದಲ್ಲಿ ಹಾಗೂ ಬಿಸೆನೆಸ್, ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಒಡಕು ಉಂಟಾಗಬಹುದು. ಹಣಕಾಸಿನ ವಿಚಾರವಾಗಿ ಕೂಡ ನೀವು ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು.

Viral Video: ಇಂಡಿಗೋ ವಿಮಾನ ಎಡವಟ್ಟು: ಕೈಯಲ್ಲಿ ಅಸ್ಥಿ ಹಿಡಿದು ಏರ್‌ಪೋರ್ಟ್‌ನಲ್ಲೇ ಕುಳಿತ ಯುವತಿ!

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಭಾಗ್ಯೋದಯವಾದ ದಿನ ವಾಗಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಇಷ್ಟಾರ್ಥ ಸಿದ್ಧಿಯಾಗಲಿದ್ದು ಗುಂಪು ಕೆಲಸದಿಂದ ಧನ ಆಗಮನ ಕೂಡವಾಗುತ್ತದೆ.

ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಇಂದು ನಿಮಗೆ ತೊಂದರೆ ಎದುರಾಗಬಹುದು. ಅದೇ ರೀತಿ ನಿಮಗೆ ಬೇಕಾದಂತಹ ಯಶಸ್ಸು ಸಿಕ್ಕಿಲ್ಲ ಎನ್ನುವ ಜೇಜಾರು ಇರಬಹುದು‌.

ವೃಶ್ಚಿಕ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಿರಿಯರ ಆಶೀರ್ವಾದ ಮುಖ್ಯವಾಗುತ್ತದೆ. ಬೇರೆಯವರ ಜೊತೆ ನೀವು ವಿನಯತೆಯಿಂದ ವರ್ತಿಸ ಬೇಕಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ.ಪ್ರೇಮ ಹಾಗೂ ಪ್ರೀತಿ ಸಂಬಂಧದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಅತೀ ಹೆಚ್ಚು ನೆಮ್ಮದಿ ಸಿಗಲಿದ್ದು ಧನ ಆಗಮನದ ಸೂಚನೆಗಳು ಕೂಡ ಇಂದು ಇವೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಶತ್ರು ಭಾದೆ ಕಾಡಬಹುದು. ಯಾವುದೇ ಕೆಲಸ ಕಾರ್ಯದಲ್ಲಿ ಯಶಸ್ಸು ಇಂದು ಸಿಗುವುದಿಲ್ಲ.

ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಇಂದು ಹೆಚ್ಚಿನ ಭಾವುಕತೆ ನಿಮಗೆ ಕಾಡಬಹುದು. ಕಲಾವಿದರು, ನಟ ನಟ- ನಟಿಯರಿಗೆ ಇಂದು ಒಳಿತು.