ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ಸ್ವಾತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಇಂದು ಅತೀ ಉತ್ತಮವಾದ ದಿನವಾಗಿದೆ. ಪಾರ್ಟನರ್‌ಶಿಪ್ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಮನಸ್ಸಿಗೆ ನೆಮ್ಮದಿ ಇದ್ದು, ಸಾಮಾಜಿಕ ಚಟುವಟಿಕೆಗಳಲ್ಲಿ ಅಭಿವೃದ್ಧಿ ಕಾಣುತ್ತೀರಿ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಯಶಸ್ಸಿನ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಲಿದ್ದು, ನೀವು ಜಯವನ್ನು ಕಾಣುತ್ತೀರಿ. ಕಾರ್ಯಕ್ಷೇತ್ರದಲ್ಲೂ ಹೆಚ್ಚಿನ ಅಭಿವೃದ್ಧಿ ಕಾಣಬಹುದು.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಆದರೆ ಪ್ರೇಮ, ಪ್ರೀತಿ ವಿಚಾರದಲ್ಲಿ ಬೇಸರ. ಮಕ್ಕಳ ಬಗ್ಗೆ ಎಚ್ಚರಿಕೆ ಅಗತ್ಯ.
ಕಟಕ ರಾಶಿ: ಇಂದು ಕಷ್ಟದ ದಿನವಾಗಲಿದೆ. ವ್ಯವಹಾರದಲ್ಲಿ ನಷ್ಟ ಉಂಟಾಗುತ್ತದೆ. ಆದರೆ ಮಾಧ್ಯಮ ಹಾಗೂ ಮಾರ್ಕೆಂಟಿಗ್ ವ್ಯವಹಾರದಲ್ಲಿ ಇರೋರಿಗೆ ಯಶಸ್ಸು ಸಿಗುತ್ತದೆ.
ಸಿಂಹ ರಾಶಿ: ಇಂದು ಉತ್ತಮ ದಿನವಾಗಲಿದೆ. ಮನಸ್ಸಿನಲ್ಲಿ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಬಂಧು-ಬಾಂಧವರ ಜತೆ ಸರಿಯಾದ ದಿನ ಕಳೆಯುತ್ತೀರಿ.
ವಾಸ್ತು ದೋಷ , ಆರೋಗ್ಯ: ಯಾವ ದಿಕ್ಕು ಯಾವ ಅನಾರೋಗ್ಯ ಸಮಸ್ಯೆಗೆ ಕಾರಣ?
ಕನ್ಯಾ ರಾಶಿ: ಈ ದಿನ ಉತ್ತಮ ದಿನವಾಗಲಿದೆ. ಸಂಸಾರದಲ್ಲಿ ನೆಮ್ಮದಿ ಸಿಗಲಿದ್ದು ಅಂದುಕೊಂಡಂತ ಕೆಲಸಗಳು ಕೈ ಹಿಡಿಯಲಿವೆ.
ತುಲಾ ರಾಶಿ: ಇಂದು ಉತ್ತಮ ದಿನವಾಗಲಿದೆ. ಹಿಂದಿನ ದಿನದಲ್ಲಿ ಇದ್ದ ತೊಂದರೆ ಮಾಯವಾಗುತ್ತದೆ. ಕೆಲಸ ಕಾರ್ಯದಲ್ಲಿ ಎಲ್ಲರ ಸಹಕಾರ ದೊರೆಯುತ್ತದೆ.
ವೃಶ್ಚಿಕ ರಾಶಿ: ಇಂದು ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗುವುದಿಲ್ಲ. ನಾನಾ ರೀತಿಯ ಯೋಚನೆ ಕಾಡಬಹುದು.
ಧನು ರಾಶಿ: ಇಂದು ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದ ಲ್ಲಿ ಜವಾಬ್ದಾರಿ ಹೆಚ್ಚಾಗಬಹುದು. ನಿಮ್ಮ ಶ್ರಮಕ್ಕೆ ತಕ್ಕ ಲಾಭ ಸಿಗಬಹುದು.
ಮಕರ ರಾಶಿ: ಇಂದು ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಮಾಯವಾಗುತ್ತದೆ.
ಕುಂಭ ರಾಶಿ: ಇಂದು ಉತ್ತಮ ದಿನವಾಗಲಿದೆ. ಆರೋಗ್ಯ ಸಮಸ್ಯೆ ಪರಿಹಾರ ಆಗುತ್ತದೆ. ವ್ಯವಹಾರದಲ್ಲಿ ಲಾಭ ಸಿಗಲಿದೆ.
ಮೀನ ರಾಶಿ: ಇಂದು ಕಷ್ಟದ ದಿನವಾಗಲಿದೆ. ಯಾರ ಸಹಕಾರ ಕೂಡ ಸಿಗದೇ ಇರಬಹುದು. ಮನಸ್ಸಿಗೆ ಅತೀ ಹೆಚ್ಚಿನ ಬೇಸರ ಉಂಟಾಗಬಹುದು.