ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾ ಯನ ಶಿರದೃತು, ಮಘೆ ಮಾಸೆ, ಕೃಷ್ಣೆ ಪಕ್ಷದ, ಅನುರಾಧ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ಅನುರಾಧ ನಕ್ಷತ್ರ ಇದ್ದು ಇದರ ಅಧಿಪತಿ ಶನಿ ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಏನೇ ಮಾಡಿದರೂ ಕೂಡ ನಿಮ್ಮ ಪರವಾಗಿ ನಡೆಯುವುದಿಲ್ಲ. ಹಾಗಾಗಿ ಮುಖ್ಯ ನಿರ್ಧಾರಗಳನ್ನು ಕೈಗೊಳ್ಳಲು ಹೋಗಬೇಡಿ.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ನಿಮ್ಮ ಪ್ರೀತಿ ಪಾತ್ರರಿಂದ ನಿಮಗೆ ಬೇಕಾದಂತ ಫಲಗಳು ಇಂದು ಸಿಗಬಹುದು.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ನಿಮಗೆ ಬೇಕಾದಂತಹ ಫಲಗಳು ಸಿಗಬಹುದು. ಮಾಧ್ಯಮಗಳಲ್ಲಿ ಕೆಲಸ ಮಾಡೋರಿಗೆ ಲಾಭದಾಯಕವಾಗಿದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಹಣಕಾಸಿನ ವಿಚಾರ, ಬಿಸೆನೆಸ್ ವ್ಯವಹಾರದಲ್ಲಿ ಅಂದುಕೊಂಡ ಲಾಭಗಳು ಬರುವುದಿಲ್ಲ.
Vastu Tips: ಮಲಗುವಾಗ ತಲೆದಿಂಬಿನ ಬಳಿ ಈ ವಸ್ತುಗಳನ್ನು ಇಟ್ಟುಕೊಂಡರೆ ಆರೋಗ್ಯ, ನೆಮ್ಮದಿ
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ತಾಯಿಯ ಜೊತೆ ಮಾತುಕತೆಯಲ್ಲಿ ತೊಂದರೆ ಉಂಟಾಗಬಹುದು. ಕೋರ್ಟ್, ಕಛೇರಿ ವ್ಯವಹಾರದಲ್ಲಿ ಇರೋರಿಗೆ ಏನು ನಿಮ್ಮ ಪರವಾಗಿ ನಡೆಯುದಿಲ್ಲ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಆತ್ಮವಿಶ್ವಾಸ ತುಂಬಾ ಚೆನ್ನಾಗಿ ಇರುತ್ತದೆ. ಸೋಷಿಯಲ್ ಮೀಡಿಯಾ, ಮಾರ್ಕೆಟಿಂಗ್ ಇತ್ಯಾದಿಯಲ್ಲಿ ಇರೋರಿಗೆ ಲಾಭದಾಯಕವಾದ ದಿನವಾಗಿದೆ
ತುಲಾ ರಾಶಿ: ತುಲಾ ರಾಶಿಯವರು ನಿಮ್ಮ ಕುಟುಂಬದ ಬಗ್ಗೆ ಹೆಚ್ಚಿನ ಕಾಳಜಿ ನೀಡಬೇಕಾಗುತ್ತದೆ. ಹಾಗಾಗಿ ಕುಟುಂಬದ ಜೊತೆ ವಿನಯತೆಯಿಂದ ನಡೆದುಕೊಳ್ಳಬೇಕು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಅತೀ ಉತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಮನಸ್ಸಿನ ಎಲ್ಲ ತೊಂದರೆಗಳು ಬಗೆಹರಿದು ಎಲ್ಲ ರೀತಿಯಲ್ಲಿ ಮಾರ್ಗದರ್ಶನ ಪ್ರಾಪ್ತಿ ಯಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯ ನಿರ್ಧಾರಗಳು ಯಾವುದೇ ಬೇಡ. ನಿಮ್ಮ ಪ್ರೀತಿ ಪಾತ್ರ ರಿಂದ, ಮಿತ್ರರಿಂದ ಯಾವುದೇ ಸಹಕಾರ ಇಂದು ಸಿಗುವುದಿಲ್ಲ.
ಮಕರ ರಾಶಿ: ಮಕರ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಧನ ಆಗಮನದ ಸೂಚನೆ ಗಳಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ.ಇಷ್ಟಾರ್ಥ ಸಿದ್ದಿಯಾಗಲಿದೆ.
ಕುಂಭರಾಶಿ: ಈ ರಾಶಿಯವರಿಗೆ ಕಾರ್ಯಕ್ಷೇತ್ರದ ಜವಾಬ್ದಾರಿ ಜಾಸ್ತಿ ಯಾಗಲಿದ್ದು ಯಶಸ್ಸು ಪ್ರಾಪ್ತಿ ಯಾಗುತ್ತದೆ.ಉತ್ತಮ ಗೌರವವನ್ನು ಇಂದು ಪಡೆದುಕೊಳ್ಳುತ್ತೀರಿ.
ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ.ಹಿಂದಿನ ಎರಡು ಮೂರು ದಿನದ ಮನಸ್ಸಿನ ಎಲ್ಲ ತೊಂದರೆಗಳು ಬಗೆಹರಿದು ಮಾರ್ಗ ದರ್ಶನ ಸಿಗುತ್ತದೆ.