ಬೆಂಗಳೂರು, ಮೇ 6: ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಪಂಚಮಿ ತಿಥಿ, ಮೂಲ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಮೂಲ ನಕ್ಷತ್ರದ ಅಧಿಪತಿ ಕೇತು. ಹಾಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಕ್ಷೇಶ ಮಾಯವಾಗುತ್ತದೆ. ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ವೃಷಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ನೀವು ಆಡುವ ಮಾತಿನಿಂದ ಇಂದು ತೊಂದರೆಗಳು ಜಾಸ್ತಿಯಾಗುವ ಸಾಧ್ಯತೆ ಇದೆ. ಮನಸ್ಸಿಗೆ ಬಹಳ ಬೇಸರ ಆಗುವ ದಿನ ನಿಮ್ಮದಾಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಉತ್ತಮ ದಿನವಾಗಲಿದೆ. ಎಲ್ಲ ಕಡೆಯಿಂದಲೂ ಸಹಕಾರ ಪ್ರಾಪ್ತಿಯಾಗುತ್ತದೆ. ಪಾರ್ಟನರ್ ಶಿಪ್ ವ್ಯವಹಾರದಲ್ಲೂ ಅಭಿವೃದ್ಧಿಯಾಗಲಿದ್ದು, ದಾಂಪತ್ಯದಲ್ಲೂ ನೆಮ್ಮದಿ ಸಿಗುತ್ತದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಸಾಮಾಜಿಕ ಚಟುವಟಿಕೆಯಲ್ಲಿ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಎಲ್ಲ ಕೆಲಸ ಕಾರ್ಯದಲ್ಲೂ ಇಂದು ಜಯ ಪ್ರಾಪ್ತಿಯಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ವ್ಯವಹಾರದಲ್ಲಿ ನಷ್ಟ ಉಂಟಾಗುವ ಸಾಧ್ಯತೆ ಇದೆ. ಪ್ರೀತಿ, ಪ್ರೇಮ ವಿಚಾರವಾಗಿ ಬೇಸರ ಮೂಡಬಹುದು. ಕ್ರಿಯಾಶೀಲತೆಯಿಂದ ಮಾಡುವ ಕೆಲಸದಿಂದ ಮಾತ್ರ ಜಯ ಪ್ರಾಪ್ತಿಯಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮಕ್ಕಳಿಂದ ಸಮಸ್ಯೆ ಕಂಡು ಬರುವ ಸಾಧ್ಯತೆ ಇದೆ. ಮನೆಯ ಜವಾಬ್ದಾರಿ, ತಾಯಿಯ ಆರೋಗ್ಯ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಕೆಲವೊಂದು ಸಾಮಾನ್ಯ ವಿಚಾರದಲ್ಲಿ ಜಗಳ ಉಂಟಾಗುವ ಸಾಧ್ಯತೆ ಇದೆ.
ಕರ್ಪೂರದಿಂದ ಮನೆಯ ವಾಸ್ತು ದೋಷ ನಿವಾರಣೆ: ಆರ್ಥಿಕ ಸಮಸ್ಯೆ, ಕಲಹಗಳಿಗೆ ಇಲ್ಲಿದೆ ಪರಿಹಾರ
ತುಲಾ ರಾಶಿ: ತುಲಾ ಅವರಿಗೆ ಉತ್ತಮವಾದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದೆ. ಅದೇ ರೀತಿ ಮಿತ್ರರಿಂದಲೂ ಸಹಾಯ ಪ್ರಾಪ್ತಿಯಾಗುತ್ತದೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನೆಯಲ್ಲಿ ನೆಮ್ಮದಿ ಸಿಗಲಿದ್ದು ಎಲ್ಲ ಕೆಲಸ ಕಾರ್ಯದಲ್ಲೂ ಜಯ ಪ್ರಾಪ್ತಿಯಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಆದರೆ ಹಿಂದಿನ ದಿನದಲ್ಲಿ ಇದ್ದ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನಷ್ಟ ಉಂಟಾಗುವ ಸಾಧ್ಯತೆ ಇದೆ.
ಕುಂಭರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಆರ್ಥಿಕ ಲಾಭ ಗಳಿಸಲಿದ್ದು, ಎಲ್ಲವೂ ಇಂದು ನಿಮ್ಮ ಪರವಾಗಿಯೇ ನಡೆಯುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ನಿಮ್ಮ ಪ್ರತಿಷ್ಠೆಯೂ ಇಂದು ಜಾಸ್ತಿಯಾಗಬಹುದು.