ಬೆಂಗಳೂರು: ನಿತ್ಯದ ನಮ್ಮ ಬದುಕಿನಲ್ಲಿ ನಿಯಮಗಳನ್ನು (vastu tips) ಪಾಲಿಸಬೇಕು. ಇಲ್ಲವಾದರೆ ಯಾವುದಾದರೂ ಒಂದು ರೀತಿಯಲ್ಲಿ ನಾವು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ನಾವು ಮಲಗುವ (vastu for sleep) ಭಂಗಿಯು ಕೂಡ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ (Vastu shastra). ಸರಿಯಾದ ದಿಕ್ಕಿನಲ್ಲಿ ನಾವು ತಲೆ ಇಟ್ಟು ಮಲಗುವುದರಿಂದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತದೆ ಮತ್ತು ಜೀವನದಲ್ಲಿ ಪ್ರಗತಿಗೆ ಕಾರಣವಾಗುತ್ತದೆ. ಮಲಗುವ ದಿಕ್ಕು ನಮ್ಮ ಮನಸ್ಸು, ಮೆದುಳು ಮತ್ತು ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾಗಿ ಈ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಕೆಲವು ಸಂಗತಿಗಳಿವೆ.
ನಿದ್ರೆ ದೇಹಕ್ಕೆ ವಿಶ್ರಾಂತಿ ಮಾತ್ರವಲ್ಲ ನಮ್ಮೊಳಗೆ ಶಕ್ತಿ ಮತ್ತು ಸಕಾರಾತ್ಮಕತೆಯನ್ನು ತುಂಬುವ ದಾರಿಯಾಗಿದೆ. ಆದ್ದರಿಂದ ಮಲಗುವಾಗ ತಲೆಯನ್ನು ಒಂದು ನಿರ್ಧಿಷ್ಟ ದಿಕ್ಕಿನಲ್ಲಿ ಇರಿಸಿ ಮಲಗಬೇಕು. ಯಾಕೆಂದರೆ ನಾವು ಮಲಗುವ ದಿಕ್ಕು ನಮ್ಮ ಮನಸ್ಸು, ಮೆದುಳು ಮತ್ತು ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ.
ಮಲಗುವಾಗ ತಲೆಯನ್ನು ದಕ್ಷಿಣ ಅಥವಾ ಪೂರ್ವ ದಿಕ್ಕಿನಲ್ಲಿ ತಲೆ ಇಟ್ಟು ಮಲಗುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ದಕ್ಷಿಣ ದಿಕ್ಕನ್ನು ಯಮ ಸ್ಥಾನವೆಂದು ಪರಿಗಣಿಸಲಾಗುತ್ತದೆ. ಇದು ದೇಹದಲ್ಲಿನ ಕಾಂತೀಯ ಶಕ್ತಿಯನ್ನು ಸಮತೋಲನಗೊಳಿಸುತ್ತದೆ.
ಮಲಗುವಾಗ ದಕ್ಷಿಣ ದಿಕ್ಕಿನಲ್ಲಿ ತಲೆ ಇಟ್ಟು ನಿದ್ದೆ ಮಾಡಿದರೆ ಆಳವಾದ ಮತ್ತು ಶಾಂತಿಯುತ ನಿದ್ರೆ ಬರುತ್ತದೆ. ದಕ್ಷಿಣಕ್ಕೆ ತಲೆಯಿಟ್ಟು ಮಲಗುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಒತ್ತಡ ಕಡಿಮೆಯಾಗುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ. ಇದನ್ನು ವಿಜ್ಞಾನ ಕೂಡ ಒಪ್ಪಿಕೊಂಡಿದೆ. ಪೂರ್ವ ದಿಕ್ಕು ಜ್ಞಾನ ಮತ್ತು ಪ್ರಗತಿಯ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಈ ದಿಕ್ಕಿನಲ್ಲಿ ತಲೆಯಿಟ್ಟು ಮಲಗುವುದರಿಂದ ಸ್ಮರಣಶಕ್ತಿ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ. ಇದು ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಮಾನಸಿಕ ಶಾಂತಿಯನ್ನು ಕೊಡುತ್ತದೆ. ಜೀವನದಲ್ಲಿ ಪ್ರಗತಿಗೆ ಕಾರಣವಾಗುತ್ತದೆ.
ಇದನ್ನೂ ಓದಿ: Vastu tips: ದೇವರ ಕೋಣೆಯಲ್ಲಿ ಧಾರ್ಮಿಕ ಗ್ರಂಥಗಳನ್ನು ಇಡಬಹುದೇ?
ಉತ್ತರ ದಿಕ್ಕಿನಲ್ಲಿ ತಲೆ ಇಟ್ಟು ಮಲಗುವುದು ಒಳ್ಳೆಯದಲ್ಲ. ಇದು ನಿದ್ರಾಹೀನತೆ, ಆಯಾಸ ಮತ್ತು ಮಾನಸಿಕ ಅಶಾಂತಿಗೆ ಕಾರಣವಾಗಬಹುದು. ಅದೇ ರೀತಿ ಪಶ್ಚಿಮ ದಿಕ್ಕು ಕೂಡ ಸೂಕ್ತವಲ್ಲ. ಮಲಗುವಾಗ ಸರಿಯಾದ ದಿಕ್ಕಿನಲ್ಲಿ ತಲೆ ಇಟ್ಟು ಮಲಗಿದರೆ ಮಾತ್ರ ಆರೋಗ್ಯಕ್ಕೆ ಪ್ರಯೋಜನಕಾರಿಯಾಗುತ್ತದೆ. ಇದು ನಮ್ಮೊಳಗೇ ಸಕಾರಾತ್ಮಕ ಶಕ್ತಿಯನ್ನು ತುಂಬುತ್ತದೆ. ಜೀವನದಲ್ಲಿ ಯಶಸ್ಸು ಸಾಧಿಸಲು ಸಹಾಯ ಮಾಡುತ್ತದೆ.