ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು ಚೈತ್ರ ಮಾಸೆ, ಮೂಲ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಮೂಲ ನಕ್ಷತ್ರದ ಅಧಿಪತಿ ಕೇತು ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮೇಷ ರಾಶಿಯವರಿಗೆ ಇಂದು ಭಾಗ್ಯೋದಯವಾದ ದಿನ ವಾಗುತ್ತದೆ. ಆದರೂ ಕೂಡ ಮನಸ್ಸಿನಲ್ಲಿ ಸ್ವಲ್ಪ ಬೇಸರ ಮೂಡಬಹುದು. ಯಾವುದೇ ರೀತಿಯ ಸಮಾಧಾನ ನಿಮಗೆ ಇರುವುದಿಲ್ಲ.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಇವತ್ತು ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಪ್ರೇಮ ಪ್ರೀತಿ ಪ್ರಕರಣದಲ್ಲಿ ನಿಮಗೆ ಬೇಸರ ಮೂಡಬಹುದು.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಅತೀ ಉತ್ತಮವಾದ ದಿನವಾಗಿದೆ. ನಿಮ್ಮ ಪ್ರೀತಿ ಪಾತ್ರರಿಂದ ಹಾಗೂ ಪಾರ್ಟ್ನರ್ಸ್ ಶಿಪ್ ವ್ಯವಹಾರದಲ್ಲೂ ಅತೀ ಖುಷಿ ಸಿಗುವ ದಿನವಾಗಿದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಸಾಮಾಜಿಕ ಚಟುವಟಿಕೆಯಲ್ಲಿ ಹೆಚ್ಚಿನ ಹುರುಪು ಸಿಗುತ್ತದೆ .ನಿಮ್ಮ ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ಅಡೆ- ತಡೆಗಳು ಇಂದು ಬೇಕಾಗಿಲ್ಲ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಆದರೆ ಹಣಕಾಸಿನ ತೊಂದರೆ ನಿಮಗೆ ಕಾಡುವ ಸಾಧ್ಯತೆ ಇರುತ್ತದೆ. ಬಿಸೆನೆಸ್ ವ್ಯವಹಾರದಲ್ಲೂ ನಷ್ಟ ಉಂಟಾಗುವ ಸಾಧ್ಯತೆ ಇರುತ್ತದೆ.
Vastu Tips: ಮುಖ್ಯ ದ್ವಾರದಲ್ಲಿ ಸ್ವಸ್ತಿಕ ಹಾಕುವಾಗ ಈ ನಿಯಮ ಪಾಲಿಸಿ; ಇಲ್ಲವಾದರೆ ಅಶುಭ ಫಲವೇ ಹೆಚ್ಚು
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ನಿಮ್ಮ ಮನೆಯವರ ಜೊತೆ ಉತ್ತಮ ಸಮಯ ಕಳೆಯಲು ಅವಕಾಶ ಇರುತ್ತದೆ. ಆದರೆ ಎಲ್ಲರ ಜೊತೆ ವಿನಯತೆಯಿಂದ ವರ್ತಿಸಬೇಕಾಗುತ್ತದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಧನ ಆಗಮನ ವಾಗುವ ಸಾಧ್ಯತೆ ಇದ್ದು ನಿಮ್ಮ ಮಾತಿನಿಂದ ಎಲ್ಲವನ್ನು ಗೆಲ್ಲುತ್ತೀರಿ
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಸಂಸಾರದಲ್ಲಿ ನೆಮ್ಮದಿ ಇರುತ್ತದೆ. ಮನೆಯ ಕಡೆ ಹೆಚ್ಚಿನ ಜವಾಬ್ದಾರಿ ನೀವು ನೀಡಬೇಕಾಗಿ ಇರುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ನಿಮ್ಮ ರಾಶಿಗೆ ಚಂದ್ರ ಬಂದಿದ್ದಾನೆ. ಹೀಗಾಗಿ ಮನಸ್ಸಿನ ತುಮುಲ ಬಗೆಹರಿದು ಯಶಸ್ಸಿನ ಮಾರ್ಗದರ್ಶನ ನಿಮಗೆ ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೋಗಬೇಡಿ. ಯಾವುದೇ ನಿಮ್ಮ ಪರವಾಗಿ ಇಂದು ನಡೆಯುವುದಿಲ್ಲ.
ಕುಂಭರಾಶಿ: ಈ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಗುಂಪು ಕೆಲಸದಿಂದ ಯಶಸ್ಸು ಸಿಗುತ್ತದೆ.
ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಕೂಡ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ. ಬೇರೆಯವರಿಂದ ಪ್ರಶಂಸೆ ನಿಮಗೆ ಒದಗಿ ಬರಲಿದೆ.