ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ವಿಶಾಖ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಪ್ರೀತಿ ಪಾತ್ರರ ಜೊತೆ ಬಹಳಷ್ಟು ವಿಶ್ವಾಸವನ್ನು ಇಂದು ಗಳಿಸುತ್ತೀರಿ. ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಇಂದು ನೆಮ್ಮದಿ ಯನ್ನು ಕಾಣುತ್ತೀರಿ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಮುಂದುವರಿಯುತ್ತಿದೆ. ಆರೋಗ್ಯದಲ್ಲೂ ಕೂಡ ಇಂದು ಸುಧಾರಣೆ ಕಂಡು ಬರುತ್ತಿದೆ.
ಮಿಥುನ ರಾಶಿ: ಇಂದು ಈ ರಾಶಿಗೆ ಕಷ್ಟಕರವಾದ ದಿನವಾಗಿದೆ. ನಿಮ್ಮ ಬುದ್ದಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಮಾತ್ರ ಜಯ ಕಾಣುತ್ತೀರಿ. ಹಾಗಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ
ಕಟಕ ರಾಶಿ: ಕಟಕ ರಾಶಿಗೆ ತಾಯಿಯ ಆರೋಗ್ಯ ಬಗ್ಗೆ ನೀವು ಗಮನ ಹರಿಸಬೇಕಾಗುತ್ತದೆ. ಮನೆಯ ಜವಾಬ್ದಾರಿಗಳು ಕೂಡ ಇಂದು ಹೆಚ್ಚಾಗಿ ಇರುತ್ತದೆ. ಆಸ್ತಿ ಪಾಸ್ತಿ ವಿಚಾರವಾಗಿ ಇಂದು ನೀವು ಗಮನ ನೀಡಬೇಕಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹಾಗೂ ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಯಶಸ್ಸು ಸಿಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಕುಟುಂಬದ ಬಗ್ಗೆ ಸಮಸ್ಯೆಗಳು ಕಾಡಬಹುದು. ಪ್ರೀತಿ ಪಾತ್ರರ ಜೊತೆ ಒಡಕು ಉಂಟಾಗುವ ಸಾಧ್ಯತೆ ಕೂಡ ಇಂದು ಹೆಚ್ಚು ಇರುತ್ತದೆ.
Vastu Tips: ಮನೆಯಲ್ಲಿ ಇರುವೆಗಳು ಕಾಣಿಸಿದರೆ ಏನರ್ಥ? ಕಪ್ಪು-ಕೆಂಪು ಇರುವೆಗಳು ನೀಡುವ ಶುಭ-ಅಶುಭ ಸಂಕೇತಗಳು ಇವು
ತುಲಾ ರಾಶಿ: ತುಲಾ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಬಗೆಹರಿಯುತ್ತದೆ. ಮುಂದಿನ ಕೆಲಸಕ್ಕೆ ಸರಿಯಾದ ಮಾರ್ಗದರ್ಶನ ನಿಮಗೆ ಸಿಗುತ್ತದೆ
ವೃಶ್ಚಿಕ ರಾಶಿ: ಈ ರಾಶಿಗೆ ಕಷ್ಟಕರವಾದ ದಿನವಾಗಿದೆ. ಯಾರ ಸಹಕಾರ ಇಂದು ಸಿಗುವುದಿಲ್ಲ. ಮನಸ್ಸಿಗೆ ಬೇಸರ ಉಂಟಾಗುವ ಸಾಧ್ಯತೆ ಇರುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಎಲ್ಲ ರೀತಿಯಿಂದಲೂ ನಿಮಗೆ ಜಯ ಪ್ರಾಪ್ತಿಯಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಭಾಗ್ಯೋದಯವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಇಂದು ಪ್ರತಿಷ್ಠೆ ಅಭಿವೃದ್ಧಿಯಾಗಬಹುದು.
ಕುಂಭರಾಶಿ: ಈ ರಾಶಿಯವರಿಗೆ ಭಾಗ್ಯೋದಯವಾದ ದಿನವಾಗಿದೆ. ಆದರೆ ಹಿರಿಯರ ಆಶೀರ್ವಾದ ಇಲ್ಲದೆ ಏನು ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಹೆಚ್ಚಿನ ಗಮನವನ್ನು ನೀವು ಹರಿಸಬೇಕಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಬೇಡವಾದ ವಿಚಾರದಲ್ಲಿ ಪಾಲ್ಗೊಳ್ಳಲು ಹೋಗಬೇಡಿ. ಕೆಲಸ ಕಾರ್ಯದಲ್ಲಿ ಎಚ್ಚರಿಕೆ ಅಗತ್ಯವಾಗಿರುತ್ತದೆ..