ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಅಶ್ವಿನಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು, ಬಾಸ್‌ನಿಂದ ಪ್ರಶಂಸೆ ಸಿಗಲಿದೆ. ಖರ್ಚುಗಳನ್ನು ನಿಯಂತ್ರಿಸಿದರೆ ಉತ್ತಮ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಲಾಭದಾಯಕ ದಿನವಾಗಲಿದೆ. ಹಿಂದೆ ಉಳಿದಿದ್ದ ಬಾಕಿ ಹಣವು ಇಂದು ನಿಮ್ಮ ಕೈ ಸೇರಲಿದೆ. ಕೆಲಸದ ಒತ್ತಡ ಹೆಚ್ಚಾದರೂ ಕಾರ್ಯಕ್ಷಮತೆಯಿಂದ ಯಶಸ್ಸು ಪಡೆಯುತ್ತೀರಿ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸ್ನೇಹಿತರ ಸಹಾಯದಿಂದ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವಿದ್ಯಾರ್ಥಿಗಳಿಗೆ ಇಂದು ಅಧ್ಯಯನದಲ್ಲಿ ಪ್ರಗತಿ ಕಂಡು ಬರಲಿದೆ.
ಕಟಕ ರಾಶಿ: ಕಟಕ ರಾಶಿಯವರು ಇಂದು ಕುಟುಂಬದಿಂದ ಶುಭ ಸುದ್ದಿ ಪಡೆಯಬಹುದು. ವ್ಯಾಪಾರ ಹಾಗೂ ಸಂಬಂಧದಲ್ಲಿ ಪ್ರಗತಿ ಕಾಣುತ್ತೀರಿ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕೆಲಸದ ಹೊರೆ ಹೆಚ್ಚಾಗಬಹುದು. ಆದರೆ ಆತ್ಮವಿಶ್ವಾಸದಿಂದ ಮಾಡಿದ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯದಲ್ಲಿ ಎಚ್ಚರ ಅಗತ್ಯ.
ಕನ್ಯಾ ರಾಶಿ: ಕನ್ಯಾ ರಾಶಿಯವರು ಇಂದು ವೃತ್ತಿಯಲ್ಲಿ ಅಭಿವೃದ್ಧಿ ಕಾಣಬಹುದು. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.
ಮನೆಗೆ ಸುಖ, ಸಮೃದ್ಧಿ ತರಲು ಪಾಲಿಸಬೇಕಾದ ಪ್ರಮುಖ ನಿಯಮಗಳು
ತುಲಾ ರಾಶಿ: ತುಲಾ ರಾಶಿಯವರಿಗೆ ಮನೆ ಹಾಗೂ ಆಸ್ತಿ ವಿಚಾರದಲ್ಲಿ ನೆಮ್ಮದಿ ಸಿಗುತ್ತದೆ. ಆದರೆ ತಾಯಿಯ ಆರೋಗ್ಯದ ಬಗ್ಗೆ ಗಮನ ನೀಡಬೇಕಾಗುತ್ತದೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಸ್ನೇಹ ಸಂಬಂಧದಲ್ಲಿ ನೆಮ್ಮದಿ ಸಿಗುತ್ತದೆ. ಹೂಡಿಕೆಯ ಮೂಲಕ ಇಂದು ನೀವು ಲಾಭ ಗಳಿಸಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಹೊಸ ಯೋಜನೆಗಳಲ್ಲಿ ಹೂಡಿಕೆ ಮಾಡಲು ಉತ್ತಮ ದಿನವಾಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಇಂದು ಲಾಭ ಕಂಡು ಬರಲಿದೆ. ಆದರೆ ಖರ್ಚುಗಳನ್ನು ನಿಯಂತ್ರಿಸಬೇಕಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಪ್ರಗತಿ ಸಿಗಲಿದ್ದು, ಜನಪ್ರಿಯತೆ ಹೆಚ್ಚಾಗುತ್ತದೆ. ಆತ್ಮವಿಶ್ವಾದಿಂದ ಎಲ್ಲವನ್ನು ಇಂದು ಗೆಲ್ಲಲು ಸಾಧ್ಯ.
ಕುಂಭ ರಾಶಿ: ಈ ರಾಶಿಯವರಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಸೃಜನಶೀಲ ಕೆಲಸದಲ್ಲಿ ಇಂದು ಲಾಭ. ಆರ್ಥಿಕ ಸ್ಥಿತಿ ಸ್ಥಿರವಾಗಿರುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಇಂದು ಕೆಲಸದಲ್ಲಿ ಪ್ರಗತಿ. ಸಕಾರಾತ್ಮಕ ಯೋಚನೆಯ ಮೂಲಕ ಆತ್ಮವಿಶ್ವಾಸ ಹೆಚ್ಚಾಗಬಹುದು.