Thursday, 1st December 2022

ಅ.1ರಿಂದ ಅರಮನೆ ವೀಕ್ಷಣೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ದಸರಾ ಪ್ರಯುಕ್ತ ಮೈಸೂರು ರಾಜಮನೆತನದವರು ಅರಮನೆ ಒಳ ಆವರಣದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸುವುದರಿಂದ ಅ.1ರಿಂದ ಅರಮನೆ ವೀಕ್ಷಣೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಅ.1ರಂದು ಸಿಂಹಾಸನ ಜೋಡಣೆ ಪ್ರಯುಕ್ತ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶವಿರುವುದಿಲ್ಲ. ಅ.7ರಂದು ಖಾಸಗಿ ದರ್ಬಾರ‍್’ನಲ್ಲಿ ರಾಜ ವಂಶಸ್ಥರು ಧಾರ್ಮಿಕ ಪೂಜೆ ನಡೆಸುವುದರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಪ್ರವೇಶ ನಿಷೇಧಿಸಲಾಗಿದೆ.

ಅ.14ರಂದು ಆಯುಧ ಪೂಜೆ ಹಾಗೂ ಅ.15ರಂದು ವಿಜಯದಶಮಿ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಪ್ರವೇಶವಿರುವುದಿಲ್ಲ. ಅ.31ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಿಂಹಾಸನ ವಿಸರ್ಜನಾ ಕಾರ್ಯಕ್ರಮ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಉಪನಿರ್ದೇಶಕ ಸುಬ್ರಮಣ್ಯ ತಿಳಿಸಿದ್ದಾರೆ.