Tuesday, 9th August 2022

ಎಂ.ಎಸ್​.ರಕ್ಷಾ ರಾಮಯ್ಯಗೆ ಆಂಧ್ರ ರಾಜ್ಯದ ಉಸ್ತುವಾರಿ

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್​.ರಕ್ಷಾ ರಾಮಯ್ಯ ಅವರಿಗೆ ಆಂಧ್ರಪ್ರದೇಶ ರಾಜ್ಯದ ಉಸ್ತುವಾರಿ ನೀಡಲಾಗಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್​ನ ಹಲವು ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ ಕೊಟ್ಟಿದ್ದು, ರಕ್ಷಾ ರಾಮಯ್ಯಗೆ ಆಂಧ್ರಪ್ರದೇಶದಲ್ಲಿ ಯುವ ಕಾಂಗ್ರೆಸ್ ವ್ಯವಹಾರಗಳನ್ನು ನೋಡಿಕೊಳ್ಳುವ ಉಸ್ತುವಾರಿ ವಹಿಸಲಾಗಿದೆ.

ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಬೇರುಗಳು ಗಟ್ಟಿಯಾಗಿದ್ದು, ಯುವ ಕಾಂಗ್ರೆಸ್ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢ ಮತ್ತು ಪ್ರಬಲವಾಗಿ ಸಂಘಟಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.