ಡೆಂಘೀ ಉಲ್ಬಣ; ಮುನ್ನಚ್ಚರಿಕೆ ಅಗತ್ಯ
ಡೆಂಘೀ ಉಲ್ಬಣ; ಮುನ್ನಚ್ಚರಿಕೆ ಅಗತ್ಯ


ಹವಾಮಾನದಲ್ಲಿ ವೈಪರೀತ್ಯ ಹಾಗೂ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಘೀ ಪೀಡಿತರ ಸಂಖ್ಯೆ ಉಲ್ಬಣಗೊಂಡಿದ್ದು, ಒಂದೇ ತಿಂಗಳಲ್ಲಿ ೯೮೭ ಪ್ರಕರಣಗಳು ದೃಢಪಟ್ಟಿವೆ.
ಈ ವರ್ಷದಲ್ಲಿ ಇದುವರೆಗೂ 7024 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಮರಣ ಹೊಂದಿದ್ದಾರೆ. ಈ ವರ್ಷ ಎಲ್ಲ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ವರದಿ ಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 1227 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. ೨೯ ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳೂ ಪತ್ತೆಯಾಗಿದ್ದು, 1700 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ.
ಮಳೆ ಶುರುವಾಗುತ್ತಿದ್ದಂತೆ ಸಾರ್ವಜನಿಕರು ಕೆಲವು ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದು ಕೊಳ್ಳಬೇಕಾದ ಅಗತ್ಯವಿದೆ. ಸೊಳ್ಳೆಗಳ ನಿರ್ಮೂಲನೆಯೇ ಇಲ್ಲಿ ಪ್ರಮುಖ ಪಾತ್ರವಹಿಸು ತ್ತದೆ. ಡೆಂಘೀ ಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಮನೆ ಸುತ್ತಮುತ್ತ ಒಳಾಂಗಣದಲ್ಲಿ ಮತ್ತು ಹೊರಾಂಗಣದಲ್ಲಿ ನೀರು ಶೇಖರಣೆಯಾಗ ದಂತೆ ಎಚ್ಚರ ವಹಿಸಬೇಕು.
ವಯೋವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಡೆಂ ತಡೆಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸಬೇಕು. ಸೊಳ್ಳೆ ಕಚ್ಚದಂತೆ ಮೈತುಂಬಾ ಬಟ್ಟೆ ಧರಿಸಬೇಕು. ಸೊಳ್ಳೆ ಬತ್ತಿ ಮತ್ತು ಮುಲಾಮು ದ್ರಾವಣ ಉಪಯೋಗಿಸಬೇಕು. ಒಳಾಂಗಣ ಮತ್ತು ಹೊರಾಂಗಣದ ಸಿಮೆಂಟ್ ತೊಟ್ಟಿಗಳು, ಪ್ಲಾಸ್ಟಿಕ್ ಡ್ರಮ, ಬಕೆಟ್, ಬ್ಯಾರಲ್, ಹೂವಿನ ಕುಂಡಗಳು, ಹವಾನಿಯಂತ್ರಿತ ಉಪಕರಣ (ಎ.ಸಿ), ಮಡಿಕೆಗಳು, ಒರಳು ಕಲ್ಲು, ತೆಂಗಿನ ಚಿಪ್ಪು ಗಳಲ್ಲಿ ಮಳೆ ನೀರು ಶೇಖರಣೆಯಾಗಿ ಈಡಿಸ್ ಲಾರ್ವಾ ಉತ್ಪತ್ತಿಯಾಗುತ್ತವೆ.
ನೀರು ಶೇಖರಣೆ ಮಾಡಿರುವ ತೊಟ್ಟಿ, ಡ್ರಮ್‌ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಕೆರೆ, ಕುಂಟೆ, ಕಾಲುವೆ, ತೊಟ್ಟಿಗಳಲ್ಲಿ ಗಪ್ಪಿ ಅಥವಾ ಗ್ಯಾಂಬೂಸಿಯಾ ಮೀನು ಮರಿಗಳನ್ನು ಬಿಡಬೇಕು. ನೀರಿನ ಡ್ರಮ್‌ಗಳಿಗೆ ಮುಚ್ಚಳ ಮುಚ್ಚಬೇಕು
ಹಾಗೂ ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಬಾಟಲಿ, ಪ್ಲಾಸ್ಟಿಕ್ ಲೋಟಗಳು, ಒರಳು ಕಲ್ಲು, ಚಿಪ್ಪಿನಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು.
ಡೆಂಘೀ ಅಥವಾ ಚಿಕೂನ್ ಗುನ್ಯಾ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಸ್ಪತ್ರೆಗಳನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯ ಬೇಕು. ಆರೋಗ್ಯ ಇಲಾಖೆಯು ಡೆಂಘೀ ಸಂಶಯಾಸ್ಪದ ಪ್ರಕರಣಗಳ ಬಗ್ಗೆ ಸಮುದಾಯಕ್ಕೆ ಅರಿವು ಮೂಡಿಸಬೇಕು