ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Vishwavani Editorial: ಶಾಲಾ ಕಟ್ಟಡಗಳ ಅಸುರಕ್ಷತೆ

ಅಪಾಯಕಾರಿಯಾದ ಕಟ್ಟಡಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸುವ ಅಥವಾ ದುರಸ್ತಿ ಮಾಡುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ಕಾಲಮಿತಿಯೊಳಗೆ ಕೈಗೊಳ್ಳಬೇಕಾಗಿತ್ತು. ಶಿಕ್ಷಣ ಎನ್ನುವುದು ಮಕ್ಕಳ ಭವಿಷ್ಯ ನಿರ್ಮಾಣದ ಅಡಿಪಾಯ. ಆದರೆ, ಸುರಕ್ಷಿತ ಕಟ್ಟಡಗಳ ಕೊರತೆ ಯಿಂದ ಮಕ್ಕಳ ಜೀವವೇ ಅಪಾದಲ್ಲಿರುವ ಪರಿಸ್ಥಿತಿ ನಿರ್ಮಾಣವಾಗಬಾರದು.

Vishwavani Editorial: ಶಾಲಾ ಕಟ್ಟಡಗಳ ಅಸುರಕ್ಷತೆ

-

Profile
Ashok Nayak Jun 15, 2026 10:57 AM

ಕಲಬುರಗಿ ನಗರದ ಸರಕಾರಿ ಪಿಯು ಕಾಲೇಜಿನಲ್ಲಿ ಸಂಭವಿಸಿದ ದುರಂತದ ಆಘಾತ ಇನ್ನೂ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಆಳಂದ ತಾಲೂಕಿನ ಸಂಗೋಳಗಿ (ಸಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡದ ಮೇಲ್ಛಾವಣಿಯ ಸಿಮೆಂಟ್ ಪದರ ಕುಸಿದು ಬಿದ್ದಿರುವ ಘಟನೆ ಶಿಕ್ಷಣ ಇಲಾಖೆಯ ಕಟ್ಟಡ ಸುರಕ್ಷತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಅದೃಷ್ಟವಶಾತ್ ಘಟನೆ ಭಾನುವಾರ ನಡೆದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಇದು ಒಂದು ಎಚ್ಚರಿಕೆಯ ಗಂಟೆಯಾಗಿದೆ. ಶಾಲೆಯ ಮುಖ್ಯ ಶಿಕ್ಷಕರು ಕುಸಿದು ಬಿದ್ದಿರುವ ಕೋಣೆ ಸುಮಾರು 60 ರಿಂದ 70 ವರ್ಷಗಳಷ್ಟು ಹಳೆಯದಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಅಲ್ಲಿ ತರಗತಿಗಳನ್ನು ನಡೆಸುತ್ತಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ವಿವರಣೆ ಸಮಾಧಾನಕರ ವಾಗಿದ್ದರೂ, ಇಂತಹ ಕಟ್ಟಡಗಳು ರಾಜ್ಯದ ಅನೇಕ ಶಾಲೆಗಳಲ್ಲಿ ಇನ್ನೂ ಅಸ್ತಿತ್ವದಲ್ಲಿರುವುದು ಆತಂಕಕಾರಿ ಸಂಗತಿಯಾಗಿದೆ.

ಇದನ್ನೂ ಓದಿ: Kalaburagi News: ಪೋಕ್ಸೊ ಕೇಸ್ ತನಿಖೆಗೆ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಕಾನ್ಸ್‌ಟೇಬಲ್, ಎಎಸ್‌ಐ ಎಸ್ಕೇಪ್!

ಅಪಾಯಕಾರಿಯಾದ ಕಟ್ಟಡಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸುವ ಅಥವಾ ದುರಸ್ತಿ ಮಾಡುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ಕಾಲಮಿತಿಯೊಳಗೆ ಕೈಗೊಳ್ಳಬೇಕಾಗಿತ್ತು. ಶಿಕ್ಷಣ ಎನ್ನುವುದು ಮಕ್ಕಳ ಭವಿಷ್ಯ ನಿರ್ಮಾಣದ ಅಡಿಪಾಯ. ಆದರೆ, ಸುರಕ್ಷಿತ ಕಟ್ಟಡಗಳ ಕೊರತೆ ಯಿಂದ ಮಕ್ಕಳ ಜೀವವೇ ಅಪಾದಲ್ಲಿರುವ ಪರಿಸ್ಥಿತಿ ನಿರ್ಮಾಣವಾಗಬಾರದು.

ಗ್ರಾಮೀಣ ಪ್ರದೇಶಗಳ ಅನೇಕ ಸರಕಾರಿ ಶಾಲೆಗಳು ಹಳೆಯ ಕಟ್ಟಡಗಳ ಕಾರ್ಯ ನಿರ್ವಹಿಸುತ್ತಿದ್ದು, ಮಳೆಗಾಲದ ಸಂದರ್ಭದಲ್ಲಿ ಇವುಗಳ ಸ್ಥಿತಿ ಮತ್ತಷ್ಟು ಹದಗೆಡುತ್ತದೆ. ಅಧಿಕಾರಿಗಳು ಕೇವಲ ವರದಿಗಳನ್ನು ಪಡೆದು ಕಡತಗಳಲ್ಲಿ ದಾಖಲಿಸುವುದಕ್ಕಿಂತ, ಸ್ಥಳ ಪರಿಶೀಲನೆ ನಡೆಸಿ ತುರ್ತು ಕ್ರಮಗಳನ್ನು ಜಾರಿಗೊಳಿಸುವುದು ಅಗತ್ಯವಾಗಿದೆ.

ಸರಕಾರ ಹಾಗೂ ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಶಾಲಾ ಕಟ್ಟಡಗಳ ಸಮಗ್ರ ಸುರಕ್ಷತಾ ಪರಿಶೀಲನೆ ನಡೆಸಿ, ಅಪಾಯಕಾರಿಯಾದ ಕಟ್ಟಡಗಳನ್ನು ತಕ್ಷಣ ದುರಸ್ತಿ ಅಥವಾ ಪುನರ್‌ನಿರ್ಮಾಣ ಮಾಡಬೇಕು. ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಸಲ್ಲದು.