ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vishwavani Editorial: ದೇವಭೂಮಿಯ ಘೋರ ದುರಂತ

2013ರ ಉತ್ತರಾಖಂಡ ಪ್ರವಾಹವು 5000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿತ್ತು ಮತ್ತು 2000ಕ್ಕೂ ಹೆಚ್ಚು ಮನೆಗಳನ್ನು ಹಾನಿಗೊಳಿಸಿತ್ತು. 2021ರಲ್ಲಿ ಚಮೋಲಿ ಪ್ರವಾಹದಿಂದ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಉತ್ತರಾಖಂಡದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಭೂಕುಸಿತ ಮತ್ತು ಪ್ರವಾಹಕ್ಕೆ ಗುರಿಯಾಗುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ

ದೇವಭೂಮಿ ಎಂದೇ ಕರೆಯಲ್ಪಡುವ ಉತ್ತರಾಖಂಡ ರಾಜ್ಯವು ಪ್ರಕೃತಿಯ ರುದ್ರ ನರ್ತನಕ್ಕೆ ಮತ್ತೊಮ್ಮೆ ಅಕ್ಷರಶಃ ತ್ತತರಿಸಿ ಹೋಗಿದೆ. ಅಲ್ಲಿನ ಉತ್ತರಕಾಶಿ ಜಿಲ್ಲೆಯಲ್ಲಿ ಸಂಭವಿಸಿದ ಮೇಘ ಸ್ಫೋಟ, ಅದರ ನಂತರ ಕಂಡುಬಂದ ದಿಢೀರ್ ಪ್ರವಾಹದಿಂದ ಹರ್ಸಿಲ್ ಸಮೀಪದ ಧರಾಲಿ ಗ್ರಾಮಕ್ಕೆ ಗ್ರಾಮವೇ ಕೊಚ್ಚಿ ಹೋಗಿದೆ. ಮನೆ, ಹೊಟೇಲ್, ಅಂಗಡಿಗಳು ಕೆಸರಿನಲ್ಲಿ ಹೂತಿದ್ದು, ರಸ್ತೆಗಳ ಸಂಪರ್ಕ ಕಡಿತಕೊಂಡಿದೆ.

ಸೈನಿಕರು, ಪ್ರವಾಸಿಗರೂ ಸೇರಿದಂತೆ ಸುಮಾರು ಅರುವತ್ತು ಮಂದಿ ನಾಪತ್ತೆಯಾಗಿದ್ದಾರೆ ಎಂಬರ್ಥದ ವಿಡಿಯೊಗಳು ದುರಂತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಎಡೆಬಿಡದೆ ಸುರಿಯು ತ್ತಿರುವ ಮಳೆಯು ಅಲ್ಲಿನ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹವಾಮಾನ ವ್ಯವಸ್ಥೆಯಲ್ಲಿನ ತಾಪಮಾನ ವ್ಯತ್ಯಾಸದಿಂದ ಭಾರೀ ಮೋಡಗಳ ಘನೀಕರಣದಿಂದ ಮೇಘಸ್ಫೋಟ ಉಂಟಾಗುತ್ತದೆ.

ಇದನ್ನೂ ಓದಿ: Vishwavani Editorial: ಈಗ ಬಾಲಂಗೋಚಿಯ ಸರದಿ!

ಇದು ಮನೆಗಳು, ಕಟ್ಟಡಗಳು, ರಸ್ತೆಗಳು ಮತ್ತು ವಾಹನಗಳನ್ನು ಸುಲಭವಾಗಿ ನಾಶಪಡಿಸುತ್ತದೆ. ಉತ್ತರಕಾಶಿಯ ಹಠಾತ್ ಪ್ರವಾಹದಲ್ಲಿ ಧರಾಲಿ ಗ್ರಾಮದ ಹೊಟೇಲ್‌ಗಳು ಮತ್ತು ಮನೆಗಳು ಕೆಲವೇ ನಿಮಿಷಗಳಲ್ಲಿ ನಾಶವಾದವು. ಹಠಾತ್ ಪ್ರವಾಹ ಹೆಚ್ಚಿನ ಸಂಖ್ಯೆಯ ಜನರ ಸಾವಿಗೆ ಕಾರಣ ವಾಗುತ್ತದೆ.

2013ರ ಉತ್ತರಾಖಂಡ ಪ್ರವಾಹವು 5000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿತ್ತು ಮತ್ತು 2000ಕ್ಕೂ ಹೆಚ್ಚು ಮನೆಗಳನ್ನು ಹಾನಿಗೊಳಿಸಿತ್ತು. 2021ರಲ್ಲಿ ಚಮೋಲಿ ಪ್ರವಾಹದಿಂದ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಉತ್ತರಾಖಂಡದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಭೂಕುಸಿತ ಮತ್ತು ಪ್ರವಾಹಕ್ಕೆ ಗುರಿಯಾಗುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ, ಇದು ಕೂಡ ಅಪಾಯವನ್ನು ಹೆಚ್ಚಿಸುತ್ತದೆ.