ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲುವಾಸ ನಂತರ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ಬಿಡುಗಡೆಗೊಂಡಿದ್ದಾರೆ. ಬುಧವಾರ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗಿದೆ.
ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶಶಿಕಲಾ ಚಿಕಿತ್ಸೆ ಪಡೆಯು ತ್ತಿರುವ ಟ್ರಾಮಾ ಕೇಂದ್ರದ ಒಳಗೆ ವಕೀಲರೊಂದಿಗೆ ಜೈಲು ಅಧಿಕಾರಿ ಹೋಗಿ ಸಹಿ ಪಡೆಯುವ ಮೂಲಕ ಅಧಿಕೃತವಾಗಿ ಬಿಡುಗಡೆ ಮಾಡಿದರು.
ಆಸ್ಪತ್ರೆಯಲ್ಲಿ ಶಶಿಕಲಾ ಅವರ ಸ್ವಾಬ್ ಪರೀಕ್ಷೆ ಮಾಡಲಾಗಿದ್ದು ಎರಡನೇ ಪರೀಕ್ಷೆ ಇದೇ 30ರಂದು ನಡೆಯಲಿದೆ. ಎರಡೂ ಪರೀಕ್ಷೆಗಳಲ್ಲಿ ನೆಗೆಟಿವ್ ಬಂದರೆ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದಾಗಿದೆ. ತಮಿಳುನಾಡಿನಲ್ಲಿ ಚಿನ್ನಮ್ಮ ಎಂದೇ ಖ್ಯಾತ ರಾಗಿರುವ ಶಶಿಕಲಾ ಅವರನ್ನು ಬರಮಾಡಿಕೊಳ್ಳಲು ಅವರ ಬಂಧುಗಳು, ಎಎಂಎಂಕೆ ಪಕ್ಷದ ಕಾರ್ಯಕರ್ತರು ಸಿದ್ದತೆ ಮಾಡಿ ಕೊಳ್ಳುತ್ತಿದ್ದಾರೆ.