Thursday, 11th August 2022

ಶಿವಮೊಗ್ಗದಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ, ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಪರಿಸ್ಥಿತಿ ತಿಳಿಗೊಂಡ ಹಿನ್ನಲೆಯಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭಕ್ಕೆ ಡಿಸಿ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ನಾಳೆಯಿಂದ ನಗರದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭಕ್ಕೆ ಸೂಚಿಸಿದ್ದಾರೆ. ಈ ಮೂಲಕ ಒಂದು ವಾರದಿಂದ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ.

ಬಜರಂಗದಳದ ಕಾರ್ಯಕರ್ತ ಹರ್ಷ ಕಳೆದ ಭಾನುವಾರ ಹತ್ಯೆಯಾಗಿತ್ತು. ಈ ಸಂಬಂಧ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಆರೋಪಿಗಳನ್ನು ಪೊಲೀಸರು ತನಿಖೆಗೂ ಒಳಪಡಿಸುತ್ತಿದ್ದಾರೆ. ಈ ಬೆನ್ನಲ್ಲೇ ಶಾಲಾ-ಕಾಲೇಜುಗಳಿಗೆ ಘೋಷಿಸಿದ್ದ ರಜೆಯನ್ನು ರದ್ದು ಪಡಿಸಿ, ನಾಳೆಯಿಂದ ಪುನರಾರಂಭಕ್ಕೆ ಡಿಸಿ ಆದೇಶಿಸಿದ್ದಾರೆ.