Saturday, 16th October 2021

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಸೆ.144 ಅನ್ವಯ ನಿಷೇಧಾಜ್ಞೆ ಜಾರಿ

ಮಂಗಳೂರು: ಆ.19ರಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು 6 ಪರೀಕ್ಷಾ ಕೇಂದ್ರ ಗಳ 200 ಮೀ. ಸುತ್ತಮುತ್ತಲಿನ ಪ್ರದೇಶದಲ್ಲಿ ಸೆ.144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು/ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಹಾಗೂ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ಕೂಡ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀ. ವ್ಯಾಪ್ತಿಯಲ್ಲಿ ರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *