
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಗರ್ಭಿಣಿ ಬಡ ಮಹಿಳೆಯರನ್ನು ಗುರುತಿಸಿ, ಅವರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.ಇದರ ಜತೆಗೆ ಬಡ ಮಕ್ಕಳು ಓದುವ ಶಾಲೆಗಳಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ, ಆರೋಗ್ಯ ಶಿಬಿರ,ರಕ್ತದಾನ ಶಿಬಿರದಂತಹ ಕಾರ್ಯಕ್ರಮಗಳನ್ನು ಆಯೋಜಿಸ ಲಾಗುತ್ತಿದೆ ಎಂದರು.
ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಶ್ರೀ ಸಿದ್ದಲಿಂಗಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ಶಾಸಕ ಡಿ.ಸಿ.ಗೌರಿಶಂಕರ್ ವಹಿಸುವರು. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಚಾಲನೆ ನೀಡುವರು.ಸಂಸದ ಜಿ.ಎಸ್.ಬಸವರಾಜು, ಹಣಕಾಸು ಇಲಾಖೆಯ ಜಂಟಿ ನಿರ್ದೆಶಕ ಆರ್.ರೇವಣ್ಣ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಾಮೂಹಿಕ ಸೀಮಂತಕ್ಕೆ ಆಗಮಿಸುವ ಎಲ್ಲಾ ಗರ್ಭೀಣಿ ಮಹಿಳೆಯರಿಗೆ ಶ್ರೀಸಿದ್ದಾರ್ಥ ಮೆಡಿಕಲ್ ಕಾಲೇಜಿನ ನುರಿತ ಸ್ತ್ರೀರೋಗ ತಜ್ಞರು ಉಚಿತ ವಾಗಿ ತಪಾಸಣೆ ನಡೆಸಿ, ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದಾರೆ. ತುಮಕೂರು ಗ್ರಾಮಾಂತರವಲ್ಲದೆ, ಹೊರಗಿನ ಮಹಿಳೆಯರು ಸಹ ತಮ್ಮ ಹೆಸರು ನೊಂದಾಯಿಸಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ ಎಂದರು.