Thursday, 1st December 2022

ಮಾನನಷ್ಟ ಪ್ರಕರಣ: ಅಮಿತ್‌ ಶಾಗೆ ಸಮನ್ಸ್‌

ಕೊಲ್ಕತಾ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ದಾಖಲಿಸಿರುವ ಮಾನನಷ್ಟ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಿಗೆ ಸಮನ್ಸ್‌ ಜಾರಿ ಮಾಡಿದೆ.

ಫೆ.22 ರಂದು ಅಮಿತ್‌ ಶಾ ಅವರು ಖುದ್ದಾಗಿ ಅಥವಾ ವಕೀಲರ ಮೂಲಕ ಕೋರ್ಟ್‌ ಎದುರು ಹಾಜರಾಗಬೇಕು ಎಂದು ಬಿಧಾನ್ ‌ನಗರದಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಸೂಚಿಸಿದ್ದಾರೆ. ಭಾರತೀಯ ದಂಡ ಸಂಹಿತೆಯಡಿಯಲ್ಲಿ ದಾಖಲಾ ಗಿರುವ ಮಾನಹಾನಿ ಪ್ರಕರಣದಲ್ಲಿ ಉತ್ತರಿಸಲು ಖುದ್ದು ಅಥವಾ ವಕೀಲರ ಮೂಲಕ ಅಮಿತ್‌ ಶಾ ಹಾಜರಾತಿ ಅಗತ್ಯ ಎಂದು ನ್ಯಾಯಾಧೀಶರು ಹೇಳಿದ್ದಾರೆ.

2018ರ ಆಗಸ್ಟ್‌ 11ರಂದು ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಅಮಿತ್‌ ಶಾ ಅವರು ಸಂಸದ ಅಭಿಷೇಕ್‌ ಅವರ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು.