ಬೆಂಗಳೂರು: ಬೆಳಗಾವಿ ಜಿಲ್ಲೆಗೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಚಾಣಕ್ಯ ಅಮಿತ್ ಶಾ ಆಗಮಿಸುತ್ತಿರುವ, ಕಾರ್ಯ ಕ್ರಮದ ಯಶಸ್ಸಿಗೆ ಬಿಜೆಪಿ ಟೊಂಕಕಟ್ಟಿ ನಿಂತಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಮೇಶ್ ಜಾರಕಿಹೊಳಿ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದಾರೆ.
ಎಲ್ಲಾ ಸಚಿವರು, ಕಾರ್ಯಕರ್ತರು ಸೇರಿದಂತೆ ಪದಾಧಿಕಾರಿಗಳು ಕೂಡಾ ಈ ಬೃಹತ್ ರ್ಯಾಲಿ ಯನ್ನು ಯಶಸ್ವಿಯಾಗಿ ನಡೆಸಲು ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಕೆಲಸ ಮಾಡುತ್ತಿದ್ದಾರೆ.ಇನ್ನೂ ದೇಶಾದ್ಯಂತ ಜಾರಿಯಲ್ಲಿದ್ದರೂ ಕೂಡ ಕರ್ನಾಟಕ ದಲ್ಲಿ ಬಿಜೆಪಿ ನಾಯಕರು ಬೃಹತ್ ರ್ಯಾಲಿಯನ್ನು ಆಯೋಜಿಸಲು ಮುಂದಾಗಿದ್ದಾರೆ.
ಸ್ಥಳಕ್ಕೆ ಸುಮಾರು 85 ಸಾವಿರ ವಾಹನ ಬರಲಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಗಮಿಸುವ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.