ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.