Wednesday, 5th October 2022

ಸುಮಂತ್ ಜತೆ ಹಸೆಮಣೆ ಏರಿದ ನಟಿ ಶುಭಾ ಪೂಂಜಾ

ಉಡುಪಿ: ಕನ್ನಡ ಚಿತ್ರ ಮೊಗ್ಗಿನ ಮನಸ್ಸಿನ ನಟಿ ಶುಭಾ ಪೂಂಜಾ ಬುಧವಾರ ಶಿರ್ವದ ನಿವಾಸದಲ್ಲಿ ಸುಮಂತ್ ಜತೆ ಹಸೆಮಣೆ ಏರಿದರು.

ಕೋವಿಡ್ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮ ನೆರವೇರಿರುವುದಾಗಿ ಮೂಲಗಳು ತಿಳಿಸಿವೆ.

ಕಳೆದ ವರ್ಷವೇ ವಿವಾಹವಾಗುವ ವದಂತಿ ಇತ್ತು. ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡ ಲಾಗಿತ್ತು. ಇಂದು ಸುಮಂತ್ ಮತ್ತು ಶುಭಾ ಪೂಂಜಾ ಹಸೆಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶಿರ್ವದ ಮಜಲ ಬೆಟ್ಟು ಬೀಡುವಿನಲ್ಲಿರುವ ತಮ್ಮ ನಿವಾಸದಲ್ಲಿ ಶುಭ ಪೂಂಜಾ ಸರಳವಾಗಿ ವಿವಾಹವಾಗಿದ್ದಾರೆ.

ಶುಭಾ, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರ, ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟು ಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ ಎಂದು ಇನ್ಸ್ ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.