Tuesday, 5th July 2022

ಗಾಯಕಿ ಲತಾ ಮಂಗೇಶ್ಕರ್‌ ಆರೋಗ್ಯ ಚಿಂತಾಜನಕ

ಮುಂಬೈ: ಕರೋನಾದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಗಾಯಕಿ ಲತಾ ಮಂಗೇಶ್ಕರ್‌(92 ವರ್ಷ) ಅವರ ಆರೋಗ್ಯ ಸ್ಥಿತಿ ಮತ್ತೆ ಬಿಗಡಾಯಿಸಿದೆ.

ಲತಾ ಮಂಗೇಶ್ಕರ್‌ ಅವರು ಚೇತರಿಸಿಕೊಂಡಿದ್ದಾರೆಂದು ಹೇಳಲಾಗಿತ್ತಾದರೂ ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಐಸಿಯು ನಲ್ಲಿರಿಸಿ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ.

ಜನವರಿ ಅಂತ್ಯದ ಸುಮಾರಿಗೆ ಲತಾ ಮಂಗೇಶ್ಕರ್‌ ಕೋವಿಡ್‌ ಸೋಂಕಿಗೊಳಗಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರೋನಾದಿಂದ ಗುಣಮುಖರಾಗಿದ್ದರೂ ಸಹ ಇನ್ನಿತರೆ ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ಆಸ್ಪತ್ರೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು.

ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರ ತಂಡ ಹೇಳಿದ್ದು, ಅವರ ಚೇತರಿಕೆಗಾಗಿ ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ.